Wednesday, June 25, 2025

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳಲ್ಲಿ 71ನೇ ಗಣರಾಜ್ಯೋತ್ಸವ, ಸ್ವಚ್ಛತಾ ದಿನ ಕಾರ್ಯಕ್ರಮ

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 71ನೇ ಗಣರಾಜ್ಯೋತ್ಸವ ಹಾಗೂ ಸ್ವಚ್ಛತಾ ದಿನವನ್ನು ಆಚರಿಸಲಾಯಿತು.
ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭಾರತದ ಪ್ರಜಾಪ್ರಭುತ್ವ
ವ್ಯವಸ್ಥೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಸ್ವಚ್ಛತಾ ಪ್ರತಿಜ್ಞೆ ಹಾಗೂ ಕೈ ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅವರು ಈ ಕಾರ್ಯಕ್ರಮದ ಔಚಿತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ, ಕೈ ತೊಳೆಯುವುದರ ಮಹತ್ವದ ಬಗ್ಗೆ ಮಾಹಿತಿಯೊಂದಿಗೆ ಕೈ ತೊಳೆಯುವ ಸರಿಯಾದ ವಿಧಾನವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಅಭ್ಯಾಸ ಮಾಡಿಸಲಾಯಿತು.
ಶಾಲಾ ವಿದ್ಯಾರ್ಥಿ ನಾಯಕ ರೂಪೇಶ್ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು. ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ಧ್ವಜಗೀತೆ ಮತ್ತು
ನಾಡಗೀತೆಗಳ ಗಾಯನ ಜರುಗಿತು. ದೈಹಿಕ ಶಿಕ್ಷಣ ಶಿಕ್ಷಕ ಉದಯಕೃಷ್ಣ ಭಟ್ ನಿರ್ವಹಿಸಿದರು. ಜನತಾ ವಿದ್ಯಾಸಂಸ್ಥೆಗಳ ಎಲ್ಲಾ
ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...