Saturday, January 31, 2026

ಬುರೂಜ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಬಂಟ್ವಾಳ: ಮೂಡುಪಡುಕೋಡಿ ಬುರೂಜ್ ಇಂ. ಮೀ. ಸ್ಕೂಲ್‌ ರಝಾನಗರ ಇಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಸಂವಿಧಾನದ ಪಿತಾಮಹ ಭಾರತರತ್ನಡಾ. ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರವಿಟ್ಟು ಆಚರಿಸಲಾಯಿತು. ಧರ್ಮಗುರು ಮೊಹಮ್ಮದ್‌ ಇಲಿಯಾಸ್‌ ಖಾನ್‌ ರಝ್ವಿ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಂಚಾಲಕ ಜನಾಬ್ ಶೇಕ್‌ ರಹ್ಮತ್ತುಲ್ಲಾ ಅವರು ಮಾತನಾಡಿದರು. ವಿದ್ಯಾರ್ಥಿಗಳಾದ ಲಿಶಾ ಎನ್. ಶೆಟ್ಟಿ, ಸಾಕ್ಷಾ ಶೆಟ್ಟಿ ಹಾಗೂ ರಕ್ಷಣ್‌ ಆರ್‌. ಅಡಪ ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಇವರಿಗೆ ಶಾಲಾ ಸಂಚಾಲಕ ನಗದು ಪುರಸ್ಕಾರವನ್ನು ನೀಡಿ ಗೌರವಿಸಿದರು.ಶಾಲಾ ಶಿಕ್ಷಕಿಯರಾದ ಶಾಲಿನಿ, ಎಲ್ಸಿ ವಿ.ಕೆ. ಮತ್ತು ಶೋಭಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಶಾಲಾ ನಾಯಕಿ ಶೇಕ್ ಸಾದಿಯಾ ಕಾರ್ಯಕ್ರಮ ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...