Wednesday, January 28, 2026

ಹೊರೈಝನ್ ಸ್ಕೂಲ್: 71 ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭ ವಿಧ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಮಸೀದಿಯ ಅಧ್ಯಕ್ಷ ಇಬ್ರಾಹಿಂ ಮೇಗಿನಪೇಟೆ ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹೋನೆಸ್ಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಚಾಲಕ ನೋಟರಿ ಅಬೂಬಕರ್, ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆಕಾರ್ಯದರ್ಶಿ ಹನೀಫ್ ಎಂ.ಎ., ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಝುಬೈರ್ ಮಾಸ್ಟರ್, ಮುಖ್ಯ ಶಿಕ್ಷಕ ಡಾ.ಪಿ.ಎಚ್.ಹಮೀದ್, ಪಿ.ಎಚ್. ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ರಿದಾ ಸ್ವಾಗತಿಸಿದರು. ಸನಾ ವಂದಿಸಿದರು. ತಫ್ಶೀರಾ ಕಾರ್ಯಕ್ರಮ ನಿರೂಪಿಸಿದರು.

 

 

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...