ಬಂಟ್ವಾಳ: ಇಲ್ಲಿನ ನೇತ್ರಾವತಿ ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ.


ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು ಪತ್ತೆಯಾಗಿಲ್ಲ. ಸದ್ಯ ಮೃತದೇಹವನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಶೀಥಲೀಕರಣದಲ್ಲಿಡಲಾಗಿದ್ದು, ಶವದ ಪತ್ತೆಗಾಗಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.












