Wednesday, February 12, 2025

ಗೋಡೌನ್ ನಿಂದ ಪಡಿತರ ಅಕ್ಕಿ ಕಳವು : ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಬಡವರಿಗೆ ಸರಕಾರ ನೀಡುವ ಪಡಿತರ ಅಕ್ಕಿಯನ್ನು ಗೋಡೌನ್ ನಿಂದ ಕಳವು ಮಾಡಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಂಟ್ವಾಳ ‌ನಗರ ಪೋಲೀಸ್ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ನೇತ್ರತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಜಯ್ ಕೈಕುಂಜೆ ಮತ್ತು ರಝಾಕ್ ಕುಕ್ಕಾಜೆ ಅವರನ್ನು ಪೋಲೀಸರು ಬಂಧಿಸಲಾಗಿದ್ದು, ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ಬಂಟ್ವಾಳದ ತಲಾಪಡಿ ಎಂಬಲ್ಲಿರುವ ಗೋಡೌನಲ್ಲಿ ಇರಿಸಲಾಗಿದ್ದ, ಕೋಟ್ಯಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಕಳ್ಳತನ ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆದರೆ ಈ ಬಗ್ಗೆ ಜಿಲ್ಲಾಧಿಕಾರಿ, ಪೋಲೀಸ್ ವರಿಷ್ಠಾಧಿಕಾರಿ ಮತ್ತು ರಾಜ್ಯ ಮಟ್ಟದ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಕುರಿತು ತನಿಖೆ ನಡೆಸಿ ಸ್ಪಷ್ಟವಾದ ಮಾಹಿತಿ ನೀಡುವಂತೆ ಭರವಸೆ ನೀಡಿದ್ದರು.

ಅದಾಗಿ ಕೆಲವು ತಿಂಗಳು ಕಳೆದರೂ ಪ್ರಕರಣದ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ಮತ್ತು ಕಾನೂನು ಪ್ರಕಾರ ಶಿಕ್ಷೆ ಆಗಿಲ್ಲ ಎಂದು ಜಿ‌.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ತಹಶಿಲ್ದಾರ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಶೀಘ್ರವಾಗಿ ಪ್ರಮುಖ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒತ್ತಾಯ ಮಾಡಿದ್ದರು.

ಆದರೆ ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ, ಭರವಸೆ ನೀಡಿದ್ದ ತಾಲೂಕು ತಹಶಿಲ್ದಾರ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಮತ್ತೆ ತುಂಗಪ್ಪ ಬಂಗೇರ ಅವರು ಪೋಲೀಸ್ ಠಾಣೆಯ ಮೆಟ್ಟಿಲು ಹತ್ತಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮದಲ್ಲಿ ಕಪ್ಪು ಪತಾಕೆ ಹಿಡಿಯುತ್ತೇವೆ ಎಂದು ತಿಳಿಸಿದ್ದರು.

ಇದೀಗ ಬಂಟ್ವಾಳ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದು, ಇನ್ನಷ್ಟು ಆರೋಪಿಗಳು ಹಾಗೂ ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಗಳಿವೆ ಎಂದು ಹೇಳಲಾಗಿದೆ.

ಅಭಿನಂದನೆ : ಎಂ.ತುಂಗಪ್ಪ ಬಂಗೇರ

ಆರೋಪಿಗಳನ್ನು ಬಂಧಿಸಿದ ಪೋಲೀಸರ ಕಾರ್ಯವನ್ನು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅಭಿನಂದಿಸಿದ್ದಾರೆ.

ಈ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೋಲೀಸರು ಬಂಧಿಸುವ ಭರವಸೆ ಇದೆ.

ಈಗಾಗಲೇ ಬಂಧಿಸಿದ ಆರೋಪಿ ಕಾಂಗ್ರೆಸ್ ನಾಯಕರೋರ್ವರ ಜೊತೆ ಗುರುತಿಸಿಕೊಂಡಿದ್ದಾನೆ ಎಂದು ಅವರು ಆರೋಪ ಮಾಡಿದ್ದಲ್ಲದೆ, ಘಟನೆಯ ತನಿಖೆ ಗೆ ಸರಕಾರ ಸಹಕಾರ ನೀಡದೆ ನೈಜ ಆರೋಪಿಗಳ ಬಂಧನಕ್ಕೆ ಮೀನಮೇಷ ಎಣಿಸುವ ಕಾರ್ಯಕ್ಕೆ ಗರಂ ಆದ ಬಂಗೇರ ಅವರು ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...