Thursday, February 13, 2025

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.

ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...