Monday, February 2, 2026

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2023 ಕ್ಕೆ ಪೂರ್ಣ: ನಳಿನ್ ಕುಮಾರ್ ಕಟೀಲು

ರಾಷ್ಟೀಯ ಹೆದ್ದಾರಿಯ ಮಂಗಳೂರು ಬೆಂಗಳೂರು ಮಧ್ಯೆ ಇರುವ ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮರು ಆರಂಭವಾಗಿದ್ದು 2023 ಕ್ಕೆ ಪೂರ್ಣಗೊಳ್ಳಲಿದೆ , ಇದರ ಜೊತೆಯಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ‌ ರಸ್ತೆ ಅಭಿವೃದ್ದಿಗೆ ಸರಕಾರ ಅನುಮೋದನೆ ನೀಡಿದೆ ಎಂದು ‌ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಅವರು ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿದರು.

ಬಿಸಿರೋಡು ನಿಂದ ಅಡ್ಡಹೊಳೆವರೆಗೆ ಕಾಂಕ್ರೀಟ್ ರಸ್ತೆಯ
ಕಾರ್ಯವನ್ನು ಹಿಂದೆ ಎಲ್‌ಆ್ಯಂಡ್‌ಟಿ ಸಂಸ್ಥೆಯವರು ಪ್ರಾರಂಭಿಸಿದ್ದು, ನಂತರದ ದಿನಗಳಲ್ಲಿ ಕೆಲವೊಂದು ಕಾನೂನಾತ್ಮಕ ಸಮಸ್ಯೆಯಿಂದ ಆ ಕಾರ್ಯ ನಿಂತಿದೆ.
ಅ ಬಳಿಕ ಮರು ಟೆಂಡರ್ ನಡೆದು ಶಿರಾಡಿಯಿಂದ ಕೆಲಸವನ್ನು ಪ್ರಾರಂಭಿಸಿದ್ದಾರೆ. ಶಿರಾಡಿಯಿಂದ ಬಿ.ಸಿ.ರೋಡುವರೆಗಿನ ಸಂಪೂರ್ಣ ಕಾಂಕ್ರೀಟ್ ರಸ್ತೆ 2023 ರೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.

ಬಿ.ಸಿ.ರೋಡಿನಿಂದ ಪೂಂಜಾಲಕಟ್ಟೆವರೆಗಿನ ಹೆದ್ದಾರಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.
ನಾರಾಯಣಗುರು ವೃತ್ತದಿಂದ ಜಕ್ರಿಬೆಟ್ಟುವರೆಗೆ ಕಾಂಕ್ರೀಟ್ ಕಾಮಗಾರಿ ಹಾಗೂ ಪುಂಜಾಲಕಟ್ಟೆವರೆಗೆ ದ್ವಿಪಥ ಹೆದ್ದಾರಿ ಕಾಮಗಾರಿ ವೇಗವನ್ನು ಪಡೆದುಕೊಂಡಿದೆ. ಭೂ ಸ್ವಾದೀನ, ಪೈಪುಲೈನ್ ಸಮಸ್ಯೆಯ ಜತೆಗೆ ಕೊರೊನಾ ಹಾಗೂ ಮಳೆಯಿಂದ ಕಾಮಗಾರಿ ಕೊಂಚ ವಿಳಂಬವಾಗಿದ್ದು, ಅಕ್ಟೋಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುತ್ತದೆ. ಇದರ ೨ನೇ ಹಂತವಾಗಿ ಮುಂದಿನ ಭಾಗವೆಂಬಂತೆ ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ಹೆದ್ದಾರಿ ಅಭಿವೃದ್ಧಿಗೆ ಸರಕಾರ ಅಂಗೀಕಾರ ನೀಡಿದೆ ಎಂದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...