Wednesday, January 28, 2026

ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿದ್ದ ಬೀದಿ ವ್ಯಾಪಾರಿಗಳ ತೆರವು: ವರದಿ ಫಲಶ್ರುತಿ

ಬಂಟ್ವಾಳ: ಬಿಸಿರೋಡಿನ ಮಿನಿ ವಿಧಾನ ಸೌಧ ಕಚೇರಿಯ ಸಮೀಪ ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿ ಅನಧಿಕೃತವಾಗಿ ತಳ್ಳುಗಾಡಿಗಳನ್ನು ಇಟ್ಟು ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರ ಸೂಚನೆಯಂತೆ ಟ್ರಾಫಿಕ್ ಎಸ್.ಐ.ರಾಜೇಶ್ ಅವರು ತೆರವುಗೊಳಿಸಿದ್ದಾರೆ.


ಜೊತೆಗೆ ಈ ರಸ್ತೆಯಲ್ಲಿ ಯಾರು ಕೂಡಾ ಬೀದಿ ವ್ಯಾಪಾರಿಗಳು ಪುನರಾವರ್ತಿತವಾಗಿ ವ್ಯಾಪಾರ ಮಾಡದಂತೆ ಟ್ರಾಫಿಕ್ ಪೋಲೀಸರನ್ನು ನಿಯೋಜಿಸಿದ್ದಾರೆ.


ಈ ರಸ್ತೆಯಲ್ಲಿ ನ್ಯಾಯಾಲಯ, ಮಿನಿವಿಧಾನ ಸೌಧ, ಶಾಸಕರ ಕಚೇರಿ ಸಹಿತ ಅನೇಕ ಸರಕಾರಿ ಕಚೇರಿಗಳಿಗೆ ಸಂಚಾರ ಮಾಡಬೇಕಾಗಿದೆ. ಹಾಗಾಗಿ ಅಧಿಕಾರಿಗಳ ಸಹಿತ ಸಾರ್ವಜನಿಕರಿಗೆ ಬೀದಿ ಬದಿವ್ಯಾಪರಿಗಳಿಂದ ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು.
ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಪರದಾಡುವ ಬಿಸಿರೋಡಿನ ಜನತೆಗೆ ಬೀದಿಬದಿ ವ್ಯಾಪಾರಿಗಳ ವ್ಯಾಪಾರದಿಂದ ಸಾಕಷ್ಟು ತೊಂದರೆಯಾಗುತ್ತಿತ್ತು ಎಂದು ಸಾರ್ವಜನಿಕ ರ ದೂರಾಗಿತ್ತು.

ಅಂತೂ ಕೊನೆಗೂ ತಹಶೀಲ್ದಾರ್ ಸೂಚನೆಯಂತೆ ಪೋಲೀಸರು ಬೀದಿ ವ್ಯಾಪಾರಿಗಳ ತೆರವು ಕಾರ್ಯಚರಣೆ ನಡೆದಿದೆ.
ಮತ್ತೆ ಯಾವಾಗ ತಳ್ಳುಗಾಡಿಗಳು ಇದೇ ಸ್ಥಳವನ್ನು ಆಶ್ರಯಿಸುತ್ತದೆ ಅನ್ನುವುದು ಗೊತ್ತಿಲ್ಲ, ಅಂತೂ ಸದ್ಯಕ್ಕೆ ರಸ್ತೆ ಕ್ಲೀಯರ್ ಅಗಿದೆ.
ನಮ್ಮ ಬಂಟ್ವಾಳ” ಈ ಬಗ್ಗೆ ಸಚಿತ್ರ ವರದಿ ಬಿತ್ತರಿಸಿತ್ತು. ವರದಿಯ ಬಳಿಕ ತಹಶೀಲ್ದಾರ್ ಕ್ರಮ ಕೈಗೊಂಡಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...