Thursday, February 5, 2026

ರಸ್ತೆ ಸುರಕ್ಷತಾ ನಿಯಮ ಪಾಲಿಸಿ – ಡಾ|| ಚೂಂತಾರು

ಪ್ರತೀ ವರ್ಷ ನಮ್ಮ ದೇಶದಲ್ಲಿ ಸುಮಾರು 1.5 ಲಕ್ಷ ಮಂದಿ ರಸ್ತೆ ಅಪಘಾತಗಳಿಂದ ಜೀವ ಕಳೆದುಕೊಳ್ಳುತ್ತಾರೆ. ಪ್ರತೀ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಸಾಯುತ್ತಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳನ್ನು ಬಿಗಿಗೊಳಿಸಿ ಜನರು ಸರಿಯಾಗಿ ಪಾಲಿಸಿದಲ್ಲಿ ಈ ಸಾವು ನೋವಿನ ಪ್ರಮಾಣ ತಗ್ಗಿಸಬಹುದು. 2020 ರಲ್ಲಿ ರಸ್ತೆ ನಿಯಮದ ಪರಿಷ್ಕರಣೆಯಿಂದ ಜನರ ಸಾವು ನೋವಿನ ಸಂಖ್ಯೆ ಕಡಿಮೆಯಾಗಿರುವುದು ಸಂತಸಕರ ವಿಚಾರ. ಈ ನಿಟ್ಟಿನಲ್ಲಿ ನಾವು ಇನ್ನೂ ಹೆಚ್ಚು ಜಾಗೃತರಾಗಿ ಜೀವ ಹಾನಿ ತಪ್ಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.

ನವಯುವ ಟೋಲ್, ತಲಪಾಡಿ ಇವರ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತಾ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಉಳ್ಳಾಲ ಠಾಣಾ ಸಬ್‌ಇನ್ಸ್‌ಪೆಕ್ಟರ್  ರೇವಣಸಿದ್ದ ಅವರು ರಸ್ತೆ ಸುರಕ್ಷಾ ಅಭಿಯಾನವನ್ನು ಉದ್ಘಾಟಿಸಿ, ಜನರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ನುಡಿದರು. ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇದರ ಹಿರಿಯ ಅಧಿಕಾರಿ  ಶಿಶುಮೋಹನ್ ಮಾತನಾಡಿ ರಸ್ತೆ ಸುರಕ್ಷತಾ ನಿಯಮಗಳು ಜನರಿಗಾಗಿ ಸರಕಾರ ಮಾಡಿದ ವ್ಯವಸ್ಥೆಯಾಗಿದ್ದು, ಎಲ್ಲರೂ ಪಾಲಿಸಿದರೆ ಸುಂದರ ಸಮಾಜ ನಿರ್ಮಾಣವಾಗಬಹುದು ಎಂದರು. ಪ್ರಸಾದ ನೇತ್ರಾಲಯದ  ಸಿದ್ದಾರ್ಥ್ ಶೆಟ್ಟಿ ಉಪಸ್ಥಿತರಿದ್ದರು. ನವಯುಗ ಸಂಸ್ಥೆಯ ಪ್ರಬಂಧಕರಾದ ಮತ್ತು ಶಿವಪ್ರಸಾದ್ ಪುತ್ತಿಗೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...