Wednesday, February 12, 2025

ಮೇ.28 ಕ್ಕೆ ರೋಟರಿ ಗವರ್ನರ್ ಲೊರೆಟ್ಟೋ ಹಿಲ್ಸ್ ಗೆ ಅಧಿಕೃತ ಭೇಟಿ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಮುಂದಾಳತ್ವದಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಲೋರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಲೊರೆಟ್ಟೋ ಹಿಲ್ಸ್‌ನಲ್ಲಿ ನಿರ್ಮಿತವಾದ ಸ್ವಂತ ಕಟ್ಟಡದಲ್ಲಿ ರೋಟರಿ ಸಭಾಭವನ ಮೇ.28 ರ ಮಂಗಳವಾರ ಸಂಜೆ 6 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಕ್ಲಬ್ ಅಧ್ಯಕ್ಷ ರೋ ಪಿಎಚೆಫ್ ಅವಿಲ್ ಮಿನೇಜಸ್ ತಿಳಿಸಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್‌ಕ್ಲಬ್ ನಲ್ಲಿ ಶುಕ್ರವಾರ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭಾಭವನವನ್ನು ರೋಟರಿ ಜಿಲ್ಲಾ ಗವರ್ನರ್ ರೋ ಪಿಎಚ್ ಎಫ್ ರೋಹಿನಾಥ್ ಪಾದೆ ಅವರು ಉದ್ಘಾಟಿಸಲಿದ್ದು, ಲೋರೆಟ್ಟೋ ಚರ್ಚ್ ಧರ್ಮಗುರು ವಂ.ಫಾ. ಎಲಿಯಾಸ್ ಡಿಸೋಜ ಅವರು ಆಶೀರ್ವಚನ ನೀಡಲಿರುವರು. ರೋ ಪಿಎಚ್ ಎಫ್ ಪ್ರಕಾಶ್ ಕಾರಂತ, ರೋ ಪಿಎಚ್ ಎಫ್ ಸಂಜೀವ ಪೂಜಾರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ವಿವರಿಸಿದರು.
ಕ್ಲಬ್‌ನ ಎಲ್ಲಾ ಸದಸ್ಯರ ಸಹಕಾರ, ಮಾತೃ ಸಂಸ್ಥೆ ರೋಟರಿ ಕ್ಲಬ್ ಬಂಟ್ವಾಳ ಮಾರ್ಗದರ್ಶನದಿಂದ ಸ್ವಂತ ನಿವೇಶನದೊಂದಿಗೆ ಸ್ವಂತ ಕಟ್ಟಡ ನಿರ್ಮಾಣದ ಪ್ರಗತಿಗೆ ಸಹಕಾರವಾಯಿತು ಎಂದ ಅವರು, ರೋಟರಿ ಕ್ಲಬ್‌ನ ಇತಿಹಾಸದಲ್ಲಿಯೇ ಕ್ಲಬ್ ಪ್ರಾರಂಭಗೊಂಡು ಒಂದೂವರೆ ವರ್ಷದಲ್ಲಿಯೇ ಸ್ವಂತ ನಿವೇಶನ ಹೊಂದಿ ರೋಟರಿ ಕ್ಲಬ್‌ಗೆ ಸ್ವಂತ ಕಟ್ಟಡದೊಂದಿಗೆ ಸುಸಜ್ಜಿತ ರೋಟರಿ ಸಭಾಭವನ ನಿರ್ಮಾಣ, ಮಡಂತ್ಯಾರ್‌ನಲ್ಲಿ ಹೊಸ ಕ್ಲಬ್ ಸ್ಥಾಪನೆ ಹಾಗೂ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರ್‍ಯಾಕ್ಟ್ ಕ್ಲಬ್ ಉದ್ಘಾಟನೆ ನಮ್ಮ ಸಾಧನೆ ಎಂದ ಅವರು, ನಮ್ಮ ಕ್ಲಬ್‌ನಲ್ಲಿ 6 ಜನ ಸದಸ್ಯರು ಪಿಎಚ್ ಎಫ್ ಸದಸ್ಯತನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.
ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್, ನಿಯೋಜಿತ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ಪ್ರಭಾಕರ ಪ್ರಭು, ನಾರಾಯಣ ಹೆಗ್ಡೆ, ಹರಿಪ್ರಸಾದ್ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...