Friday, June 27, 2025

ನ. 21ರಂದು ಸಂಜೆ 3.3೦ಕ್ಕೆ “ರುದ್ರಗಿರಿಯ ರಣಕಹಳೆ ” ಬೃಹತ್ ಜನಜಾಗೃತಿ ಸಭೆ: ರಾಧಾಕೃಷ್ಣ ಅಡ್ಯಂತಾಯ

ಬಂಟ್ವಾಳ: ಧಾರ್ಮಿಕ ಕೇಂದ್ರಗಳ ಮೇಲೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಬೇರೆ ಬೇರೆ ರೀತಿಯ ದಾಳಿಗಳು ಕೊನೆಯಾಗಬೇಕು, ಮತ್ತು ಜನಜಾಗೃತಿ ಗಾಗಿ ಜನಾಂದೋಲನವಾಗಬೇಕು ಎಂಬ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಹೋರಾಟದ ಪ್ರಾರಂಭಿಕ ಹಂತವಾಗಿ ಕಾರಿಂಜ ರಥಬೀದಿಯಲ್ಲಿ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಲವು ಸಂಘಟನೆಗಳ ಸಹಕಾರದೊಂದಿಗೆ ನ. 21ರಂದು ಸಂಜೆ 3.3೦ಕ್ಕೆ “ರುದ್ರಗಿರಿಯ ರಣಕಹಳೆ “ ಬೃಹತ್ ಜನಜಾಗೃತಿ ಸಭೆಯನ್ನು ಹಮ್ಮಿಕೊಂಡಿದೆ ಎಂದು ಹಿಂಜಾವೇ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ತಿಳಿಸಿದರು.

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಕಾರಿಂಜ ದೇವಸ್ಥಾನದ ಅಸ್ತಿತ್ವಕ್ಕೆ ತೊಂದರೆಯಾಗುರುತ್ತಿರುವ ಗಣಿಗಾರಿಕೆಯ ವಿರುದ್ಧ ಜನಜಾಗೃತಿ ಮೂಡಿಸಿ ಕ್ಷೇತ್ರದ ಸಂರಕ್ಷಣೆಗಾಗಿ ಕಾರಿಂಜ ರಥಬೀದಿಯಲ್ಲಿ ರುದ್ರಗಿರಿಯ ರಣಕಹಳೆ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

ಸುಮಾರು 6 ಕಿ.ಮೀ. ಪ್ರದೇಶದಲ್ಲಿ ವ್ಯಾಪಿಸಿರುವ ಈ ಶಿವನ ಬೆಟ್ಟ ಕೋಟ್ಯಂತರ ಖನಿಜ ಸಂಪತ್ತಿನ ಉಗ್ರಾಣ. ಆದರೆ ಈ ಅಮೂಲ್ಯ ಸಂಪತ್ತಿನ ಮೇಲೆ ಪ್ರಕೃತಿ ಭಂಜಕ ಸ್ವಾರ್ಥಿಗಳ ಕ್ರೂರ ದೃಷ್ಟಿ ಬಿದ್ದು, ಈಗಾಗಲೇ ನೂರಾರು ಕೋ.ರೂ.ಗಳ ಸಂಪತ್ತನ್ನು ಲೂಟಿ ಮಾಡಲಾಗಿದೆ.

ಇದರ ವಿರುದ್ಧ ಅಧಿಕಾರಿಗಳಿಗೆ ನೀಡಿದ ದೂರಿನ ಪ್ರತಿಗಳು ಕಸದ ಬುಟ್ಟಿ ಸೇರಿದೆ. ಹೀಗಾಗಿ ಅಕ್ರಮ ಗಣಿಗಾರಿಕೆಯ ವಿರುದ್ಧ ಸಂಘಟಿತ ಹೋರಾಟ ನಡೆಸುವ ಸಲುವಾಗಿ ನಮ್ಮ ಸಂಘಟನೆಯು ಈ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜನಜಾಗೃತಿಯ ಸಭೆಗೆ ಪೂರ್ವಭಾವಿಯಾಗಿ ವಗ್ಗ ಕೇಂದ್ರ ಸ್ಥಾನದಿಂದ ಕಾರಿಂಜ ಕ್ಷೇತ್ರಕ್ಕೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಬಳಿಕ ಪದ್ಮನಾಭ ಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತದೆ. ಹಿಂಜಾವೇ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂಜಾವೇ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಬಂಟ್ವಾಳ ಅಧ್ಯಕ್ಷ ತಿರುಲೇಶ್ ಬೆಳ್ಳೂರು, ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಬಾಲಕೃಷ್ಣ ಕಲಾಯಿ ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...