Tuesday, February 3, 2026

ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಮೃತ್ಯು

ಸುಳ್ಯ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ ತಾಯಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮುತ್ತಡ್ಕ ಮನೋಜ್‌ ಎಂಬವರ ಪತ್ನಿ ಪೂಜಿತಾ ಎಂದು ಗುರುತಿಸಲಾಗಿದೆ.

ಪೂಜಿತಾ ಅವರನ್ನು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ರವಿವಾರ ಬೆಳಗ್ಗೆ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿದ್ದ ಅವರಿಗೆ ಮಧ್ಯಾಹ್ನದ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಸಂಜೆಯ ವೇಳೆಗೆ ಅವರು ಚೇತರಿಸಿಕೊಂಡಿದ್ದರು. ಆದರೆ ತಡರಾತ್ರಿಯ ವೇಳೆ ಮತ್ತೆ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿದ್ದಾರೆ.

ಮಕ್ಕಳು ಆರೋಗ್ಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ. ಮೃತ ಪೂಜಿತಾ ಅವರು ತಂದೆ, ತಾಯಿ, ಸಹೋದರ, ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪೂಜಿತಾ ಅವರು ಬಿಎಡ್‌ ಅಧ್ಯಯನ ಮಾಡಿದ್ದು ಇತ್ತೀಗಷ್ಟೇ ಅವರು ಡಿಸ್ಟಿಂಕ್ಷನ್‌ನೊಂದಿಗೆ ತೇರ್ಗಡೆಯಾಗಿದ್ದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...