Friday, January 30, 2026

ಕೊರೊನಾ ಹೆಚ್ಚಳ: ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ”ಕೊರೊನಾ ಎರಡನೇ ಅಲೆ ಇನ್ನಷ್ಟು ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ” ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ 21 ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಈಗ ಕೊರೊನಾ ಹೆಚ್ಚಳ ಹಿನ್ನೆಲೆ ಮುಂದೂಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸುರೇಶ್‌ ಕುಮಾರ್‌ ಅವರು, ”ಕೊರೊನಾ ಹೆಚ್ಚಳ ಹಿನ್ನೆಲೆ ಜೂನ್ 21 ರಿಂದ ನಡೆಯಲಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು” ಎಂದು ಹೇಳಿದ್ದಾರೆ.

”ಹಾಗೆಯೇ ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಕೂಡಾ ತಿಳಿಸಿದ್ದಾರೆ.

ಇನ್ನು ಮೇ 08 ರಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಸುರೇಶ್‌ ಅವರು, ”ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಜೂನ್ 21 ರಂದು ನಡೆಸಲು ನಿಶ್ಚಯಿಸಲಾಗಿದೆ. ಈಗ ಕೊರೊನಾ ಸೋಂಕಿನ ಮಧ್ಯೆ ವಿದ್ಯಾರ್ಥಿಗಳು ಯಾವುದೇ ವಿಚಲಿತರಾಗದೆ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ” ಎಂದು ಹೇಳಿದ್ದರು.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...