Thursday, June 26, 2025

ಬಂಟ್ವಾಳ ಶಾಸಕರಿಂದ ಸಜಿಪಮುನ್ನೂರು ಗ್ರಾಮ ಪಂಚಾಯತ್ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಬಂಟ್ವಾಳ: ಕೊರೊನಾ ನಿಯಂತ್ರಣಕ್ಕೆ ಲಸಿಕೆ ಪಡೆಯುವುದೇ ಪ್ರಮುಖ ಅಸ್ತ್ರವಾಗಿದ್ದು ಗ್ರಾಮದ ಪ್ರತಿಯೊಬ್ಬ ಅರ್ಹ ವ್ಯಕ್ತಿಗಳು ಲಸಿಕೆ ಪಡೆಯುವಂತೆ ಗ್ರಾ.ಪಂ. ಟಾಸ್ಕ್ ಫೋರ್ಸ್ ಪ್ರೇರಣೆ ನೀಡುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಲಹೆ ನೀಡಿದರು.

ಅವರು ಸಜೀಪಮುನ್ನೂರು ಗ್ರಾ.ಪಂ. ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿದರು.

ಹೊರ ರಾಜ್ಯ, ಜಿಲ್ಲೆಯಿಂದ ಬಂದಿರುವ ವ್ಯಕ್ತಿಗಳ ಗ್ರಾ.ಪಂ. ಮಾಹಿತಿ ಸಮರ್ಪಕ ನೀಡದೇ ಇರುವ ಕುರಿತು ಶಾಸಕರು ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡರು. ಎಲ್ಲರೂ ಜತೆ ಸೇರಿ ಕೆಲಸ ಮಾಡಿದರೆ ನಿಮ್ಮ ಗ್ರಾಮವನ್ನು ಉಳಿಸಬಹುದು ಎಂದರು.

ತಹಶೀಲ್ದಾರ್ ರಶ್ಮಿ ಎಸ್.ಆರ್. ಮಾತನಾಡಿ, ಮಧ್ಯಾಹ್ನ 12 ಗಂಟೆವರೆಗೆ ಪಡಿತರ ವ್ಯವಸ್ಥೆ ನೀಡುವಂತೆ ತಿಳಿಸಿದರು. ‌

ಬಂಟ್ವಾಳ ತಾ.ಪಂ. ಇಒ ರಾಜಣ್ಣ ಅವರು ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿಗಳ ಕುರಿತು ವಿವರಿಸಿದರು.

ನಂದಾವರ ಪ್ರದೇಶಕ್ಕೆ 320 ಮಂದಿಗೆ ರೇಶನ್ ಕೊಟ್ಟಿಲ್ಲ ಎಂದು ಗ್ರಾ.ಪಂ. ಸದಸ್ಯರು ಆರೋಪಿಸಿದರು. ಗೋದಾಮು ಸಂಗ್ರಹದ ಕುರಿತು ಪರಿಶೀಲನೆ ನಡೆಸುವುದಾಗಿ ತಹಶೀಲ್ದಾರ್ ತಿಳಿಸಿದರು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಅಕ್ಕಿ ನೀಡುವಂತೆ ಸರಕಾರ ಆದೇಶ ನೀಡಿದೆ ಎಂದು ಶಾಸಕರು ತಿಳಿಸಿದರು.

ಫ್ಲೈಯಿಂಗ್ ಸ್ವ್ಕಾಡ್ ಅಧಿಕಾರಿ ಅಕ್ಷತಾ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ವೈಧ್ಯಾಧಿಕಾರಿ ಡಾ.ತುಫೈಲ್, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ, ಶಾಸಕರ ವಾರ್ ರೂಂ ಪ್ರಮುಖರಾದ ದೇವದಾಸ್ ಶೆಟ್ಟಿ, ದೇವಪ್ಪ ಪೂಜಾರಿ, ಪುರುಷೋತ್ತಮ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷೆ ಪೌವಸ್ತೀನ್ ಡಿಸೋಜ, ಉಪಾಧ್ಯಕ್ಷೆ ಸಬೀನಾ, ಅಭಿವೃದ್ಧಿ ಅಧಿಕಾರಿ ಮುಹಮ್ಮದ್, ಗ್ರಾಮ ಕರಣಿಕೆ ಸ್ವಾತಿ, ಗ್ರಾ.ಪಂ. ಸದಸ್ಯರು, ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...