Monday, February 2, 2026

ನಾಳೆ ನಡೆಯಬೇಕಿದ್ದ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 37ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಎ.25ರಂದು (ನಾಳೆ) ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವ ಕಾರಣ ಮುಂದೂಡಲಾಗಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

ಹಾಗೆಯೇ ಎಪ್ರಿಲ್ 25ರಂದು (ನಾಳೆ) ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ನಿಯಮಾನುಸಾರ ಸೀಮಿತ ಜನರ ಸೇರುವಿಕೆಯಲ್ಲಿ ನಡೆಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...