Monday, January 26, 2026

ವಕೀಲರ ರಕ್ಷಣಾಕಾಯ್ದೆ ಜಾರಿಗೊಳಿಸುವಂತೆ ಸರಕಾರವನ್ನು ಒತ್ತಾಯಿಸಿ ಮನವಿ

ಬಂಟ್ವಾಳ : ವಕೀಲರ ರಕ್ಷಣಾ ಕಾಯ್ದೆ ಮಸೂದೆಯನ್ನು ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡನೆ ಮಾಡಿ ಅಂಗೀಕರಿಸುವಂತೆ ಒತ್ತಾಯಿಸಿ ಇಂದು ದ.ಕ ಜಿಲ್ಲಾ ಕಾನೂನು ವೇದಿಕೆ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಂದು ವಕೀಲರಿಗೆ ರಕ್ಷಣೆ ಇಲ್ಲದಂತಾಗಿದ್ದು ಹಲವಾರು ಸಂಧರ್ಭಗಳಲ್ಲಿ ವಕೀಲರ ಮೇಲೆ ದಾಳಿಗಳಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ ಈ ನಿಟ್ಟಿನಲ್ಲಿ ಕೂಡಲೇ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವಕೀಲರ ಆಗ್ರಹವಾಗಿದೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ಜಿಲ್ಲಾ ಕಾನೂನು ವೇದಿಕೆಯ ತಾಲೂಕು ಅಧ್ಯಕ್ಷರಾದ ಸುರೇಶ್ ಪೂಜಾರಿ, ಹಿರಿಯ ವಕೀಲರಾದ ಚಂದ್ರಶೇಖರ.ಕೆ.ವಿ, ಹಾತಿಮ್ ಅಹಮ್ಮದ್, ಚಂದ್ರಶೇಖರ ರಾವ್ ಪುಂಚಮೆ, ರಾಜಾರಾಮ್ ನಾಯಕ್,ಸುರೇಶ್ ಕುಮಾರ್ ನಾವೂರು, ಉಮಾಕರ್ ಬಂಗೇರ, ಮಹಮ್ಮದ್ ಕಬೀರ್ ಕೆಮ್ಮಾರ,ಉಮೇಶ್ ಕುಮಾರ್.ವೈ , ಅಬ್ದುಲ್ ರಹಿಮಾನ್, ರಿಚಾರ್ಡ್ ಡಿ ಕೋಸ್ತ, ಸತೀಶ್.ಬಿ, ಗಂಗಾಧರ್ ನಾಯಕ್ ಯುವ ವಕೀಲರಾದ ವೀರೇಂದ್ರ ಸಿದ್ದಕಟ್ಟೆ, ಮೋಹನ್ ಕುಮಾರ್ ಕಡೇಶ್ವಾಲ್ಯ, ಚಂದ್ರಶೇಖರ್ ಬೈರಿಕಟ್ಟೆ, ಅಬ್ದುಲ್ ಜಲೀಲ್.ಎನ್, ತುಳಸೀದಾಸ್. ವಿಟ್ಲ, ಮಹಮ್ಮದ್ ಅಶ್ರಫ್, ಸಾಯಿನಾಥ್ ಗೌಡ,ಲಕ್ಮೀನಾರಾಯಣ ಸಿದ್ದಕಟ್ಟೆ, ಮಹಮ್ಮದ್ ಮುಂಝಿರ್ ಮುಂತಾದವರು ಇದ್ದರು.

More from the blog

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...