Monday, February 2, 2026

ತನ್ನ ಮರಣ ಸುದ್ದಿಯ ಬಗ್ಗೆ ಸುಮಿತ್ರಾ ಮಹಾಜನ್ ಪ್ರತಿಕ್ರಿಯಿಸಿದ್ದು ಹೀಗೆ

ದೆಹಲಿ: ತಾನು ನಿಧನರಾಗಿರುವುದಾಗಿ ಟ್ವೀಟ್ ಹಾಗೂ ಸುದ್ದಿ ಪ್ರಸಾರ ಮಾಡಿರುವವರ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕಿ, ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ನನ್ನ ಮರಣವನ್ನು ಘೋಷಿಸಲು ಅವರಿಗೆ ಅಷ್ಟೊಂದು ತುರ್ತು ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ಸುಮಿತ್ರಾ ಮಹಾಜನ್ ನಿಧನರಾಗಿದ್ದಾರೆ ಎಂದು ಗುರುವಾರ ರಾತ್ರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ ಮಾಡಿದ್ದರು. ಅಲ್ಲದೆ ಕೆಲವು ಸುದ್ದಿ ಸಂಸ್ಥೆಗಳು ಕೂಡಾ ಸುಮಿತ್ರಾ ಮಹಾಜನ್ ನಿಧನರಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು. ಆದರೆ ಕೆಲವೇ ಕ್ಷಣಗಳ ಬಳಿಕ ಬಿಜೆಪಿ ನಾಯಕರು ಸುಮಿತ್ರಾ ಮಹಾಜನ್ ಅವರ ಅರೋಗ್ಯ ಉತ್ತಮವಾಗಿದೆ ಎಂದು ಹೇಳಿ ಟ್ವೀಟ್ ಮಾಡಿದ್ದರು.

ಇಂದೋರ್ ಜಿಲ್ಲಾಡಳಿತದೊಂದಿಗೆ ಖಚಿತಪಡಿಸದೆ ನನ್ನ ನಿಧನದ ಬಗ್ಗೆ ಸುದ್ದಿ ವಾಹಿನಿಗಳು ಹೇಗೆ ವರದಿ ಮಾಡಲು ಸಾಧ್ಯ? ಯಾವುದೇ ದೃಢೀಕರಣವಿಲ್ಲದೆ ನನ್ನ ಮರಣವನ್ನು ಘೋಷಿಸುವ ತುರ್ತು ಏನು? ಎಂದು ಪ್ರಶ್ನಿಸಿರುವ ಸುಮಿತ್ರಾ ಮಹಾಜನ್, ಶಶಿ ತರೂರ್ ಅವರ ಟ್ವಿಟ್ ಬಗ್ಗೆಯೂ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗಮನಿಸಬೇಕು ಎಂದಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...