Saturday, July 12, 2025

ಸಾರಡ್ಕ ಚೆಕ್ ಪೋಸ್ಟ್ ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಹಾಗೂ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಭೇಟಿ ಪರಿಶೀಲನೆ

ವಿಟ್ಲ: ಕೊರೊನಾ ವೈರಸ್ ಜಾಗೃತಿಗಾಗಿ ಮತ್ತು ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗೆ ಪ್ರವೇಶ ನಿಷೇಧಿಸಿದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಎಲ್ಲಾ ಗಡಿ ಭಾಗದಲ್ಲಿ ಪೊಲೀಸ್ ಇಲಾಖೆ ಇಲಾಖೆ ನಾಕಾಬಂಧಿ ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಬಂದ್ ಮಾಡಿದ್ದಾರೆ.

ವಿಟ್ಲ ಠಾಣಾ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿಭಾಗವಾದ ಸಾರಡ್ಕ, ಸಾಲೆತ್ತೂರು, ಪೆರುವಾಯಿ, ನೆಲ್ಲಿಕಟ್ಟೆ, ಆನೆಕಲ್ಲುಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಬಂಟ್ವಾಳ ಸರ್ಕಲ್ ವ್ಯಾಪ್ತಿಯಿಂದ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಬೆಳಿಗ್ಗೆನಿಂದಲೇ ಪೊಲೀಸರು ಮಧ್ಯಾಹ್ನ 2 ಗಂಟೆ ಬಳಿಕ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದ್ದರು. ಬಳಿಕ ಎರಡು ಗಂಟೆಯಿಂದ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲದ ಹಲವು ಮಂದಿ ಆಗಮಿಸಿ ಚೆಕ್ ಪೋಸ್ಟ್ ಗಳಲ್ಲಿ ಕಾಯುವಂತಾಯಿತು. ಇನ್ನೂ ಕೆಲವರು ಪೊಲೀಸರೊಂದಿಗೆ ವಾಗ್ವದಕ್ಕೆ ಇಳಿದಿದ್ದಾರೆ.

ವಿಟ್ಲ, ಪುತ್ತೂರು, ಮಂಗಳೂರು ಕಡೆಯಿಂದ ಕೇರಳದ ಉಪ್ಪಳ, ಪೆರ್ಲ, ಬದಿಯಡ್ಕ ಮೊದಲಾದ ಕಡೆಗಳಿಗೆ ತೆರಳುವ ಪ್ರಯಾಣಿಕರು ಹಾಗೂ ಸರಕು ಸಾಗಾಟದ ವಾಹನಗಳು ಅರ್ಧ ದಾರಿಯಲ್ಲಿ ನಿಲ್ಲುವಂತಾಯಿತು. ಇನ್ನೂ ಕೆಲವರು ಬಂದ ದಾರಿಯಲ್ಲಿಯೇ ಹಿಂತಿರುಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ಕೂಡ ಆಗಮಿಸಿ ಚೆಕ್ ಪೋಸ್ಟ್ ಗಳ ಪರಿಶೀಲನೆ ನಡೆಸಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...