ಬಂಟ್ವಾಳ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಮೂಲಕ ಮಕ್ಕಳ ರಕ್ಷಣಾ ವ್ಯವಸ್ಥೆ ಬಲ ಪಡಿಸುವುದು ತುರ್ತಾಗಿ ಮಾಡಬೇಕಾಗಿದೆ.ಎಂದು ದ ಕ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಉಮೇಶ್ ನಿರ್ಮಲ್ ಹೇಳಿದರು.
ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಾವೂರು ಪಂಚಾಯತ್ ವ್ಯಾಪ್ತಿಯ ಸಮಿತಿ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಕಾನೂನಿನ ಅರಿವು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಸಭೆ ಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್ ಮಕ್ಕಳ ರಕ್ಷಣಾ ಸಮಿತಿ ಬಗ್ಗೆ ಮಾಹಿತಿ ನೀಡಿದರು. ಸಭೆ ಯ ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಅಂಗನವಾಡಿ ಮೇಲ್ವಿಚಾರಕಿ ಸರೋಜ ಭಟ್, ಪೊಲೀಸ್ ಸಿಬ್ಬಂದಿ ಸುಂದರ್, ನಾವೂರು ಶಾಲಾ ಶಿಕ್ಷಕಿ ವೇದಾವತಿ, ಪಡಿ ಸಂಸ್ಥೆಯ ಸಂಯೋಜಕಿ ರಾಜೇಶ್ವರಿ ಉಪಸ್ತಿತರಿದ್ದರು.