ಬಂಟ್ವಾಳ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಮಹಾಸಭೆ ಸಡೆಯಿತು.

ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ರಮಾಶಂಕರ್ ವಹಿಸಿ, ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಈ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಪತ್ ಕುಮಾರ್ ಶೆಟ್ಟಿ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆಗೊಂಡರು. ಪ್ರತಿ ತರಗತಿಯಿಂದಲೂ ಪ್ರತಿನಿಧಿಗಳನ್ನು ಆರಿಸಲಾಯಿತು. ಪೋಷಕರ ಹಾಗೂ ಶಿಕ್ಷಕರ ನಡುವೆ ವಿದ್ಯಾರ್ಥಿಗಳ ಪ್ರಗತಿ ಕುರಿತಂತೆ ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಿತು. ಕೇಶವತಿ ಕಾರ್ಯಕ್ರಮ ನಿರೂಪಿದರು.