ಬಂಟ್ವಾಳ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆ .ಎಂ .ಎಫ್ ) ಕ್ಕೆ ಸಂಯೋಜನೆ ಗೊಂಡಿರುವ ಬಂಟ್ವಾಳ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನಾ ಸಭೆಯು ಜುಲೈ 27 ರಂದು ಬೆಳಿಗ್ಗೆ 10.30ಕ್ಕೆ ಕೆ. ರವಿರಾಜ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವಿಸ್ತರಣಾಧಿಕಾರಿ ಎ. ಜಗದೀಶ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.