Tuesday, July 15, 2025

ಪುರಸಭಾ ಮಾಜಿ ಅಧ್ಯಕ್ಷೆ ಯಶೋಧ ಬಿ. ಅವರಿಗೆ ಶ್ರದ್ಧಾಂಜಲಿ ಸಭೆ

ಬಂಟ್ವಾಳ:  ಪುರಸಭೆಯ ಮಾಜಿ ಅಧ್ಯಕ್ಷೆ ಹಾಗೂ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಬಿ.ಯಶೋಧರವರು ಇತ್ತೀಚೆಗೆ ನಿಧನರಾಗಿದ್ದು, ಈ ದಿನ ಪಕ್ಷ ಕಛೇರಿಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಜರಗಿತು.

ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿಯವರು ಯಶೋಧರವರ ಕಾರ್ಯ ವೈಖಾರಿ ಮತ್ತು ಪಕ್ಷದ ಸಂಬಂಧದ ಬಗ್ಗೆ ತಿಳಿಸಿ ನುಡಿನಮನ ಸಲ್ಲಿಸಿದರು.

ಸಭೆಯಲ್ಲಿ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಮತ್ತು ಸುಲೋಚನ ಜಿ.ಕೆ. ಭಟ್ ಶ್ರದ್ಧಾಂಜಲಿ ಸಲ್ಲಿಸಿದರು. ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಕ್ಷೇತ್ರ ಉಪಾಧ್ಯಕ್ಷ ಚಿದಾನಂದ ರೈ, ರೋನಾಲ್ಡ್ ಡಿ ಸೋಜ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ಹಾಗೂ ಕ್ಷೇತ್ರ ಮಟ್ಟದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕ್ಷೇತ್ರ ಉಪಾಧ್ಯಕ್ಷ ವಜ್ರನಾಥ ಕಲ್ಲಡ್ಕ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ರವೀಶ ಶೆಟ್ಟಿ ವಂದಿಸಿದರು.

 

More from the blog

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...