ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇದಿಲ,ನೆಟ್ಲಮೂಡ್ನೂರು, ವೀರಕಂಭ,ಇಡಿಕಿದು , ಕುಲ, ಅನಂತಾಡಿ, ವಿಟ್ಲಪಡ್ನೂರು ಈ 7 ಗ್ರಾಮ ಪಂಚಾಯತಿನ ಸದಸ್ಯರು ವಲಯ ಕಾಂಗ್ರೆಸ್ ಅಧ್ಯಕ್ಷರು , ಬೂತ್ ಸಮಿತಿ ಅಧ್ಯಕ್ಷರು , ಬೂತ್ ಸಮಿತಿ ಕಾರ್ಯದರ್ಶಿ , ಬೂತ್ ಸಮಿತಿ ಬಿ ಎಲ್ ಎ, ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು , ಗ್ರಾಮ ಪಂಚಾಯತ್ ಸದಸ್ಯರು ,ಮುಖ್ಯ ಕಾರ್ಯಕರ್ತರ ಚುನಾವಣಾ ಪೂರ್ವ ತಯಾರಿ ಸಭೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ನಡೆಯಿತು.



ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿದರೆ ಗೆಲುವು ಶತಸಿದ್ದ ಹಾಗೂ ಬಂಟ್ವಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಆಹಾರ ಕಿಟ್ ಹಾಗೂ ಇತರ ಸವಲತ್ತುಗಳನ್ನು ನೀಡಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು .ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರು ಪಕ್ಷವನ್ನು ಕಟ್ಟಿ ಬೆಳೆಸೋಣ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಹಾಯ ಹಸ್ತದ ಉಸ್ತುವಾರಿಯಾದ ಅನಿತಾ ಹೇಮನಾಥ್ ಶೆಟ್ಟಿ,ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಮ್,ಎಂ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾದ ರೋಷನ್ ರೈ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ,ಮುಂಚೂಣಿ ಘಟದ ಅಧ್ಯಕ್ಷರಾದ ಇಬ್ರಾಹಿಂ ನವಾಝ್,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹರ್ಷದ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಸಿದ್ಧಿಕ್ ಸರವು ಮತ್ತು ನಿರಂಜನ್ ರೈ ಹಾಗೂ ವಲಯ ಅಧ್ಯಕ್ಷರು ಬೂತ್ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಮತ್ತು ಉಪಾಧ್ಯಕ್ಷರುಗಳು ಮತ್ತು ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಿದರು.












