Wednesday, July 2, 2025

ಸದಸ್ಯತಾ ಅಭಿಯಾನ ಯಶಸ್ವಿಗೊಳಿಸುವುದರ ಮೂಲಕ ಪಕ್ಷ ಸಂಘಟನೆ ಒತ್ತು ಕೊಡಿ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಿ.ಜೆ.ಪಿ ಸದಸ್ಯತಾ ಅಭಿಯಾನದ ಪ್ರಗತಿ ಪರಿಶೀಲನ ಸಭೆಯು ಈ ದಿನ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿತು. ಈ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತಾನಾಡಿ ಸದಸ್ಯತಾ ಅಭಿಯಾನವು ಪಕ್ಷದ ಸಂಘಟನೆ ಒಂದು ಭಾಗವಾಗಿದ್ದು, ಇಡೀ ದೇಶದಲ್ಲಿ ಅಭಿಯಾನ ಪ್ರಾರಂಭಗೊಂಡಿದ್ದು ನಮ್ಮ ಕ್ಷೇತ್ರದಲ್ಲಿ ನಮಗೆ ನೀಡಿರುವ ಗುರಿಯನ್ನು ನಾವು ಮುಟ್ಟಲು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಸದಸ್ಯತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯ ಅದ್ಯಕ್ಷತೆಯನ್ನು ಕ್ಷೇತ್ರ ಅಧ್ಯಕ್ಷರಾದ ದೇವದಾಸ ಶೆಟ್ಟಿ ವಹಿಸಿದ್ದು ಸದಸ್ಯತಾ ಅಭಿಯಾನದ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ, ವಿ.ಹಿಂ.ಪ.ದ ಮಾಜಿ ಅಧ್ಯಕ್ಷರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದಸ್ಯತಾ ಅಭಿಯಾನದ ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಈ ವೇದಿಕೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ,ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ,ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...