Monday, January 26, 2026

ಡಿ.13 ರಂದು ಓಜಾಲದಲ್ಲಿ ತಾಲೂಕು 16 ನೇ ಮಕ್ಕಳ ಸಾಹಿತ್ಯ ಸಮ್ಮೇಳನ : ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಿದಾನಂದ ಪೆಲತ್ತಿಂಜರು ಘೋಷಣೆ

ಮಕ್ಕಳ ಕಲಾ ಲೋಕ” ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವು ಓಜಾಲದಲ್ಲಿ ನಡೆಯಲಿದೆ.

ಓಜಾಲ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಸಮ್ಮೇಳನವನ್ನು ದಿನಾಂಕ 13.12.2022ರಂದು ನಡೆಸಲಾಗುವುದೆಂದು ಸಮ್ಮೇಳನದ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಚಿದಾನಂದ ಪೆಲತ್ತಿಂಜರು ಘೋಷಿಸಿದರು. ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸ ಬಹುದೆಂದು ಅವರು ಆಮಂತ್ರಿಸಿರುವರು.
18 ವರ್ಷ ವಯೋಮಾನದ ವಿದ್ಯಾರ್ಥಿಗಳಿರುವ ತಾಲೂಕಿನೊಳಗಿರುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳಲ್ಲಿ ಐದು ವರ್ಷಗಳಿಂದೀಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ವಿದ್ಯಾ ಸಂಸ್ಥೆಗೆ, ಸಮ್ಮೇಳನದಂದು “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಹಾಗೆಯೇ ಕೆಲವು ಸಂಸ್ಥೆಗಳಲ್ಲಾದರೂ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಮಕ್ಕಳಿಗೆ ಸಹಕರಿಸಿದ ಸಾಧಕರ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ಸಾಧಕರಿಗೆ, “ಬಾಲಬಂಧು” ಪ್ರಶಸ್ತಿಯನ್ನು ನೀಡಿ ಸಮ್ಮಳನದಂದು ಗೌರವಿಸಲಾಗುವುದು. ಎರಡೂ ವಿವರಗಳನ್ನು 2022 ಅಕ್ಟೋಬರ್ ಒಳಗಾಗಿ ಕೆಳಗಿನ ವಿಳಾಸಕ್ಕೆ ತಲುಪಿಸ ಬೇಕು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ವಿಳಾಸ- ಅಧ್ಯಕ್ಷರು, ‘ಮಕ್ಕಳ ಕಲಾ ಲೋಕ’ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು, “ಈಸ್ಲೆರಿ”, ಕರವೀರ- ಅಂಚೆ ನೀರ್ಕಜೆ, ಪಿನ್: 574243 ಮೊಬೈಲ್ 9448626093

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...