Tuesday, January 27, 2026

ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ : ವೇತನ 78 ಸಾವಿರ ರೂ. ಇಲ್ಲಿದೆ ಡಿಟೈಲ್ಸ್‌

ಭಾರತೀಯ ಕ್ರೀಡಾ ಪ್ರಾಧಿಕಾರವು 15 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ )
  • ಹುದ್ದೆಗಳ ಸಂಖ್ಯೆ: 15
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ನಿರ್ದೇಶಕ

ವಯೋಮಿತಿ:

ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 78800 ರಿಂದ 209200 ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-06-2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023

ಅರ್ಜಿ ಕಳುಹಿಸಬೇಕಾದ ವಿಳಾಸ:

The Director (Recruitment), Room No. 210, Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi-110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...