Monday, February 2, 2026

ದಾಖಲೆ ನಿರ್ಮಿಸಿದ ಮಾರುಕಟ್ಟೆ ಏಲಂ

ಬಂಟ್ವಾಳ : ಪ್ರತಿ ಬಾರಿ 650-700 ರೂಪಾಯಿಗಳಿಗೆ ಏಲಂ ಆಗುತ್ತಿದ್ದ ಸಜೀಪಮೂಡ ಗ್ರಾಮ ಪಂಚಾಯತಿಯ ಬೊಳ್ಳಾಯಿ ಮೀನು ಮಾರುಕಟ್ಟೆಯು ಗುರುವಾರ ಪಂಚಾಯತ್‌ನಲ್ಲಿ ನಡೆದ ಏಲಂ ಪ್ರಕ್ರಿಯೆಯಲ್ಲಿ 49,900 ರೂ.ಗಳಿಗೆ ಏಲಂ ಆಗುವ ಮೂಲಕ ದಾಖಲೆ ನಿರ್ಮಿಸಿದೆ.
ಗುರುವಾರ ಗ್ರಾಮ ಪಂಚಾಯತಿಯ ಏಳು ಅಂಗಡಿ ಕೋಣೆಗಳು ಹಾಗೂ ಒಂದು ಮೀನು ಮಾರುಕಟ್ಟೆಯ ಏಲಂ ಪ್ರಕ್ರಿಯೆ ನಿಗದಿಯಾಗಿದ್ದು, ಸಾಕಷ್ಟು ಏಲಂನಲ್ಲಿ ಪಡೆಯುವುದಕ್ಕೆ ಜಿದ್ದಾಜಿದ್ದಿ ನಡೆದಿತ್ತು. ಮೀನು ಮಾರುಕಟ್ಟೆಗೆ ಏಲಂ ಮೊತ್ತ ಏರುತ್ತಲೇ ಹೋಗಿ ವಾರ್ಷಿಕ 49,900 ರೂ.ಗಳಿಗೆ ಮೂರು ವರ್ಷಕ್ಕೆ ಏಲಂ ಆಯಿತು.
ಕೊಳಕೆ ಭಾಗದ ಅಂಗಡಿ ಕೋಣೆಗಳು ಸಾಮಾನ್ಯ ದರಕ್ಕೆ ಏಲಂ ಆದರೆ, ಬೊಳ್ಳಾಯಿ ಭಾಗದ ಒಂದು ಅಂಗಡಿ ಕೋಣೆ 7000 ರೂ.ಗಳಿಗೆ ಏಲಂ ಆಗುವ ಮೂಲಕ ಆಶ್ಚರ್ಯ ಮೂಡಿಸಿದೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...