Saturday, June 28, 2025

ಸಜೀಪ ಮುನ್ನೂರು ಅಕ್ರಮ ಮರಳುಗಾರಿಕೆಗೆ ದಾಳಿ: 800 ಮೆಟ್ರಿಕ್ ಟನ್ ಮರಳು ವಶ

ಬಂಟ್ವಾಳ: ಕಂದಾಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಸಜೀಪಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯ ಮರಳುಗಾರಿಕೆಯ ಧಕ್ಕೆ ಬಳಿ ದಾಳಿ ನಡೆಸಿದ ವೇಳೆ ಸುಮಾರು 800 ಮೆಟ್ರಿಕ್ ಟನ್ ಮರಳಿನ ಸಂಗ್ರಹ ಕಂಡು ಬಂದಿದ್ದು, ಅಧಿಕಾರಿಗಳು ಅದನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಮರಳುಗಾರಿಕೆಯ ಧಕ್ಕೆಯ ಬಳಿ ಯಾವುದೇ ಬೋಟ್‌ಗಳು ಪತ್ತೆಯಾಗದಿದ್ದು, ಆದರೆ ಅಲ್ಲೇ ಸಮೀಪದ ಜಾಗದಲ್ಲಿ ಸುಮಾರು 800 ಮೆಟ್ರಿಕ್ ಟನ್ ಮರಳು ಪತ್ತೆಯಾಗಿದೆ. ಹೀಗಾಗಿ ಅದನ್ನು ವಶಪಡಿಸಿಕೊಂಡು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಅವರು ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಅವರು ತಿಳಿಸಿದ್ದಾರೆ.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

Police Hat : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ..!  

ರಾಜ್ಯದ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯಲ್ಲಿ ಬದಲಾವಣೆಯಾಗಲಿದೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣ ಪೊಲೀಸರು ಬಳಸುವ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...