Tuesday, January 27, 2026

ಸಜೀಪಮುನ್ನೂರು: ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ವ್ಯವಸ್ಥಾಪನ ಸಮಿತಿ ಪದಗ್ರಹಣ ಸಮಾರಂಭ

ಬಂಟ್ವಾಳ: ಸಜೀಪಮುನ್ನೂರು ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ವ್ಯವಸ್ಥಾಪನ ಸಮಿತಿ ಪದಗ್ರಹಣ ಸಮಾರಂಭದಲ್ಲಿ ಈ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್. ಸುಬ್ರಹ್ಮಣ್ಯ ಭಟ್ ಅವರಿಗೆ ಗೌರವಾರ್ಪಣೆ ಸಜೀಪಮುನ್ನೂರು ಪಿ.ಡಿ.ಓ. ದೇವಸ್ಥಾನದ ಆಡಳಿತ ಅಧಿಕಾರಿ ಶಿವ ಗೊಂಡಪ್ಪ ಬಿರದಾರ ಮಾಡಿದರು.

ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣ ಶಾಮ್,ಎಂ., ಕೇಶವ ಭಟ್, ಗಿತೇಶ್ ಗಟ್ಟಿ, ಕುಸುಮ, ಪ್ರಮೀಳಾ ಗಟ್ಟಿ, ಮನೋಜ್ ಆಳ್ವ, ನಾರಾಯಣ ಐತಾಳ, ಗಣೇಶ್ ಕುಲಾಲ್, ಸಂತೋಷ್ ಎಂ.ವಿ., ಮಾಜಿ ಸದಸ್ಯ ಪುರಂದರ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...