Saturday, February 8, 2025

ಜ. 25ರಂದು ಉಜ್ವಲ ಫಲಾನುಭವಿಗಳ ಸಮಾವೇಶ: ಸಂಸದ ನಳಿನ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊಗೆಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಬಂಟ್ವಾಳದಲ್ಲಿ ಜ. 25ರಂದು ಉಜ್ವಲ ಫಲಾನುಭವಿಗಳ ಸಮಾವೇಶ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಂಟ್ವಾಳದ ಬಿ.ಸಿರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಚಿವರಾದ ರಮೇಶ್ ಜಿಗಜಿಣಗಿ, ಪೆಟ್ರೋಲಿಯಂ ಸಮಿತಿ ಅಧ್ಯಕ್ಷ ಪ್ರಹ್ಲಾದ ಜೋಷಿ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದರು.
     
ಈ ಸಂದರ್ಭ ಫಲಾನುಭವಿಗಳನ್ನು ಗುರುತಿಸುವ ಮಾಹಿತಿ ನೀಡುವ ಕಾರ್ಯ ನಡೆಯಲಿದ್ದು, ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದರು.
ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಜನವರಿ 22ರಂದು ಉದ್ಯೋಗಮೇಳ ನಡೆಯಲಿದೆ. ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ಮತ್ತೆ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಹಿಂದಿನ ಯೋಜನೆಯಂತೆಯೇ ಕಾಮಗಾರಿ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ,  ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ರಾಧಾಕೃಷ್ಣ ರೈ ಬುಡಿಯಾರ್, ಮೋನಪ್ಪ ದೇವಸ್ಯ, ರಾಮದಾಸ್ ಬಂಟ್ವಾಳ, ಜನಾರ್ದನ ಬೊಂಡಾಲ, ದೇವಪ್ಪ ಪೂಜಾರಿ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರಿದ್ದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...