Friday, June 27, 2025

ಶಾಮಿಯಾನ ಮಾಲಕರ ಬಂಟ್ವಾಳ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ ಬಂಟ್ವಾಳ ಘಟಕದ ನೂತನ ಅಧ್ಯಕ್ಷ ಪಿಯೂಸ್ ಮ್ಯಾಕ್ಸಿಂ ಸಿಕ್ವೇರಾ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ ಮಾತನಾಡಿ, ಶಾಮಿಯಾನ ಉದ್ಯಮವು ಸಮಾಜದಲ್ಲಿ ಬದಲಾವಣೆಯನ್ನು ತಂದಿದ್ದು, ಸಮಾರಂಭಗಳ ಅದ್ದೂರಿತನವನ್ನು ಇಮ್ಮಡಿಗೊಳಿಸಿದೆ. ಸಂಘಟನೆಗಳು ಸ್ನೇಹತನವನ್ನು ಬೆಳೆಸುವ ಜತೆಗೆ ಯಶಸ್ಸನ್ನೂ ತಂದುಕೊಡುತ್ತದೆ ಎಂದರು.
ಘಟಕದ ನಿಕಟಪೂರ್ವ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅವರು ಅಪಘಾತ ಪರಿಹಾರ ನಿಧಿಗೆ ಕುರಿ ಫಂಡ್ ಮೂಲಕ ಸಹಕರಿಸಿದವರಿಗೆ ಕೃತಜ್ಞತೆ ಅರ್ಪಿಸಿ ಅಽಕಾರ ಹಸ್ತಾಂತರಿಸಿದರು. ಜಿಲ್ಲಾ ಸಂಘದ ಅಧ್ಯಕ್ಷ ಬಾಬು ಕೆ.ವಿ.ಅವರು ನೂತನ ಪದಾಧಿಕಾರಿಗಳ ಜವಾಬ್ದಾರಿಗಳನ್ನು ತಿಳಿಸಿದರು.
ನೂತನ ಅಧ್ಯಕ್ಷ ಪಿಯೂಸ್ ಮ್ಯಾಕ್ಸಿಂ ಸಿಕ್ವೇರಾ ಅವರು ಸಂಘಟನೆಯಿಂದ ನಮ್ಮ ತನವನ್ನು ಗುರುತಿಸಿಕೊಳ್ಳಲು ಅವಕಾಶವನ್ನು ನೀಡಿದೆ. ಜತೆಗೆ ಸಮಾಜಿಕ ಕಾರ್ಯಕ್ಕೆ ಪ್ರೇರೇಪಣೆಯನ್ನೂ ನೀಡಿದೆ ಎಂದು ಘಟಕವನ್ನು ಬಲಪಡಿಸಲು ಎಲ್ಲಹ ಸಹಕಾರ ಕೋರಿದರು.
ವೇದಿಕೆಯಲ್ಲಿ ಮಂಗಳೂರಿನ ಉದ್ಯಮಿ ರಾಜೇಶ್, ಜಿಲ್ಲಾ ಕಾರ್ಯದರ್ಶಿ ಶಿವಪ್ರಸಾದ್ ಹೆಗ್ಡೆ, ಮೂಡಬಿದಿರೆ ಘಟಕದ ಅಧ್ಯಕ್ಷ ಗಣೇಶ್ ಕಾಮತ್, ಮಂಗಳೂರು ಘಟಕದ ಅಧ್ಯಕ್ಷ ಕ್ಲೇವರ್ಡ್ ಡಿಸೋಜ, ಬೆಳ್ತಂಗಡಿ ಘಟಕದ ಅಧ್ಯಕ್ಷ ಜೆರ್ಮಿ ಡಿಸೋಜ ಉಪಸ್ಥಿತರಿದ್ದರು.
ಕೋಶಾಽಕಾರಿ ಅಬ್ದುಲ್ ಮಜೀದ್, ಉಪಾಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಕಲ್ಲಡ್ಕ, ಪ್ರಶಾಂತ್ ಪೂಂಜ, ಜತೆ ಕಾರ್ಯದರ್ಶಿ ಐವನ್ ಡಿಸೋಜಾ, ರಾಜೇಂದ್ರ ಜೈನ್, ವಿಭಾಗ ಸಂಚಾಲಕರಾದ ಮೈಕಲ್ ಡಿಕೋಸ್ತಾ ಸಿದ್ದಕಟ್ಟೆ, ಪುರುಷೋತ್ತಮ ಸಾಲಿಯಾನ್ ಸಾಲೆತ್ತೂರು, ಕೇಶವ ಶೆಟ್ಟಿ ಸಜೀಪ, ಮೋಹನ್ ಮಾಣಿ, ಪ್ರದೀಪ್ ರೈ ಸರಪಾಡಿ, ಆರಿಸ್ ಫರಂಗಿಪೇಟೆ, ಇಸ್ಮಾಯಿಲ್ ವಿಟ್ಲ, ರಿಚರ್ಡ್ ಟಸ್ಕಲ್ ಬಿ.ಸಿ.ರೋಡು ಅವರು ಅಽಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಅಪಘಾತ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಲಾಯಿತು. ಗೌರವ ಸಲಹೆಗಾರ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಸ್ವಾಗತಿಸಿದರು. ಕಾರ್ಯದರ್ಶಿ ರತ್ನಾಕರ ರೈ ಮಾಣಿ ವಂದಿಸಿದರು. ಗೌರವ ಸಲಹೆಗಾರ ಸಂದೀಪ್ ಮೆನೇಜಸ್ ಮುಖ್ಯಅತಿಥಿಯನ್ನು ಪರಿಚಯಿಸಿದರು. ಇಸ್ಮಾಯಿಲ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...