Tuesday, July 1, 2025

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಾಮೂಹಿಕ ವಿವಾಹ ನೊಂದಾವಣೆಗೆ ಅರ್ಜಿ ಆಹ್ವಾನ

ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿದ್ದು 35ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 11ನೇ ವರ್ಷದ ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದೆ. ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಫೆ. 10ರಂದು ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು ಅರ್ಹ ವಧು-ವರರ ನೊಂದಾವಣೆಗೆ ಜ. 25 ಕೊನೆಯ ದಿನಾಂಕವಾಗಿದೆ.

ಆಸಕ್ತ ವಧು-ವರರು ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಛೇರಿಯಲ್ಲಿ ಸಂಪರ್ಕಿಸಬಹುದು. ವಿವಾಹವಾಗುವ ವಧುವಿಗೆ ಚಿನ್ನದ ತಾಳಿ ಹಾಗೂ ವಧು-ವರರಿಗೆ ಮಂಗಳ ವಸ್ತ್ರ ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಪ್ರತೀಜೋಡಿಯ ಖಾತೆಗೆ ಐವತ್ತು ಸಾವಿರ ರೂ. ನೀಡಲಾಗುವುದು. ಕೇವಲ ಹತ್ತು ಜೋಡಿ ವಧು-ವರರಿಗೆ ಮಾತ್ರ ಅವಕಾಶವಿದ್ದು, ಅನಾಥ, ಬಡ ಕುಟುಂಬದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...