ಬೆಂಗಳೂರು : ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ( 39) ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದಾರೆ.
ವಾಯುಪುತ್ರ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಚಿರು ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ತೀವ್ರ ಹೃದಯಾಘಾತದಿಂದ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿರುವ ನಟ ಚಿರಂಜೀವಿ ಸರ್ಜಾ ಅವರಿಗೆ ಇಂದು ತೀವ್ರ ತರವಾದಂತ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಕುಟುಂಬಸ್ಥರು ಹತ್ತಿರದ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

