Friday, January 30, 2026

ವಿಟ್ಲ: ಯಕ್ಷಸಿಂಧೂರ ವತಿಯಿಂದ ಕಲಾವಿದರಿಗೆ ಸನ್ಮಾನ, ಬಯಲಾಟ

ವಿಟ್ಲ : ವಿಟ್ಲ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ವಿಟ್ಲ ಶ್ರೀ ಭಗವತೀ ದೇವಸ್ಥಾನದ ಜಾತ್ರೆ ಮಹೋತ್ಸವ ಸಂದರ್ಭ ಬಾಲಕಲಾವಿದರ ಬಯಲಾಟ, ಹಿರಿಯ ಕಲಾವಿದರಿಗೆ ಸಮ್ಮಾನ ಮತ್ತು ಪ್ರಸಿದ್ಧ ಕಲಾವಿದರ ಬಯಲಾಟ ಮಂಗಳವಾರ ನಡೆಯಿತು.
ಶ್ರೀ ಕಟೀಲು ಮೇಳದ ನಿವೃತ್ತ ಹಿಮ್ಮೇಳ ವಾದಕ ಪೆರುವಾಯಿ ನಾರಾಯಣ ಭಟ್ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್‍ಯ ವೆಂಕಟರಾಮ ಭಟ್ ಸುಳ್ಯ ಅಭಿನಂದನ ಭಾಷಣ ಮಾಡಿದರು.
ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ.ಚರಣ್ ಕಜೆ ಭಾಗವಹಿಸಿದ್ದರು. ಇದೇ ಸಂದರ್ಭ ಕಸಾಪ ವತಿಯಿಂದ ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರನ್ನು ಸಮ್ಮಾನಿಸಲಾಯಿತು. ಕಲಾವಿದ, ಉಪನ್ಯಾಸಕ ರಾಧಾಕೃಷ್ಣ ಕಲ್ಚಾರ್ ಅಭಿನಂದನ ಭಾಷಣ ಮಾಡಿದರು.
ಯಕ್ಷ ಸಿಂಧೂರ ಪ್ರತಿಷ್ಠಾನದ ಸಂಚಾಲಕ ಚಣಿಲ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಧರ ವನಭೋಜನ ನಿರೂಪಿಸಿದರು. ಹಿಮ್ಮೇಳ ನಾದನಿನಾದ ಕಾರ್‍ಯಕ್ರಮ, ಕರ್ಗಲ್ಲು ವಿಶ್ವೇಶ್ವರ ಭಟ್ ನಿರ್ದೇಶನದಲ್ಲಿ ಬಾಲಕಲಾವಿದರಿಂದ ಪ್ರಮೀಳಾ ಸಂಧಾನ ವೀರ ವೈಷ್ಣವ ಯಕ್ಷಗಾನ ಬಯಲಾಟ ಮತ್ತು ಪ್ರಸಿದ್ಧ ಕಲಾವಿದರಿಂದ ಸತ್ವ ಪರೀಕ್ಷೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...