Friday, July 11, 2025

ಸಮಾಜದ ಕೈಗನ್ನಡಿಯಾಗಿ ಕೆಲಸ ಮಾಡುವ ಪತ್ರಕರ್ತರನ್ನು ಗುರುತಿಸುವ ಕಾರ್ಯ ಮಾಡಿದ ರೋಟರಿ ಕ್ಲಬ್: ನಾಮನಿರ್ದೇಶಿತ ಜಿಲ್ಲಾ ಗವರ್ನರ್ ವಿಕ್ರಂ ದತ್ತ

ಬಂಟ್ವಾಳ: ಸಮಾಜದ ಆಗು ಹೋಗುಗಳನ್ನು ಜನರಿಗೆ ತಿಳಿಸುತ್ತಾ, ಸಮಾಜದ ಕೈಗನ್ನಡಿಯಾಗಿ ಕೆಲಸ ಮಾಡುವ ಪತ್ರಕರ್ತರನ್ನು ಗುರುತಿಸುವ ಕಾರ್ಯ ಮಾಡಿದ ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಕಾರ್ಯ ಅಭಿನಂದನೀಯ ಎಂದು ನಾಮನಿರ್ದೇಶಿತ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಹೇಳಿದರು.

ಅವರು ಬಿ.ಸಿ.ರೋಡು ಸಿಟಿ ಇದರ ವತಿಯಿಂದ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಬಂಟ್ವಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿದರು. ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಅಧ್ಯಕ್ಷ ಸತೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ಆರ್ ಪದ್ಮನಾಭ ರೈ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರಾದ ಸಂದೀಪ್ ಸಾಲ್ಯಾನ್ ಹಾಗೂ ಹರೀಶ್ ಮಾಂಬಾಡಿ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯದರ್ಶಿ ಪಲ್ಲವಿ ಕಾರಂತ್ ವಂದಿಸಿದರು. ಸದಸ್ಯರಾದ ಟಿ.ಶೇಷಪ್ಪ ಮೂಲ್ಯ ಹಾಗೂ ಸುಪ್ರಿಯಾ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...