Sunday, January 25, 2026

ಸಾರಡ್ಕ ಚೆಕ್ ಪೋಸ್ಟ್ ಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಹಾಗೂ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಭೇಟಿ ಪರಿಶೀಲನೆ

ವಿಟ್ಲ: ಕೊರೊನೊ ವೈರಸ್ ಜಾಗೃತಿಗಾಗಿ ಮತ್ತು ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗೆ ಪ್ರವೇಶ ನಿಷೇಧಿಸಿದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಎಲ್ಲಾ ಗಡಿ ಭಾಗದಲ್ಲಿ ಪೊಲೀಸ್ ಇಲಾಖೆ ಇಲಾಖೆ ನಾಕಾಬಂಧಿ ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಬಂದ್ ಮಾಡಿದ್ದಾರೆ.

 

ವಿಟ್ಲ ಠಾಣಾ ವ್ಯಾಪ್ತಿಯ ಕರ್ನಾಟಕ ಕೇರಳ ಗಡಿಭಾಗವಾದ ಸಾರಡ್ಕ, ಸಾಲೆತ್ತೂರು, ಪೆರುವಾಯಿ, ನೆಲ್ಲಿಕಟ್ಟೆ, ಆನೆಕಲ್ಲು ಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಬಂಟ್ವಾಳ ಸರ್ಕಾಲ್ ವ್ಯಾಪ್ತಿಯಿಂದ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಬೆಳಿಗ್ಗೆನಿಂದಲೇ ಪೊಲೀಸರು ಮಧ್ಯಾಹ್ನ 2 ಗಂಟೆ ಬಳಿಕ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದ್ದರು. ಬಳಿಕ ಎರಡು ಗಂಟೆಯಿಂದ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲದ ಹಲವು ಮಂದಿ ಆಗಮಿಸಿ ಚೆಕ್ ಪೋಸ್ಟ್ ಗಳಲ್ಲಿ ಕಾಯುವಂತಾಯಿತು. ಇನ್ನೂ ಕೆಲವರು ಪೊಲೀಸರೊಂದಿಗೆ ವಾಗ್ವದಕ್ಕೆ ಇಳಿದಿದ್ದಾರೆ. ವಿಟ್ಲ, ಪುತ್ತೂರು, ಮಂಗಳೂರು ಕಡೆಯಿಂದ ಕೇರಳದ ಉಪ್ಪಳ, ಪೆರ್ಲ, ಬದಿಯಡ್ಕ, ಮೊದಲಾದ ಕಡೆಗಳಿಗೆ ತೆರಳುವ ಪ್ರಯಾಣಿಕರು ಹಾಗೂ ಸರಕು ಸಾಗಾಟದ ವಾಹನಗಳು ಅರ್ಧ ದಾರಿಯಲ್ಲಿ ನಿಲ್ಲುವಂತಾಯಿತು. ಇನ್ನೂ ಕೆಲವರು ಬಂದ ದಾರಿಯಲ್ಲಿಯೇ ಹಿಂತಿರುಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಕೂಡ ಆಗಮಿಸಿ ಚೆಕ್ ಪೋಸ್ಟ್ ಗಳ ಪರಿಶೀಲನೆ ನಡೆಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...