Tuesday, January 27, 2026

ಫೆ.1: ಸರಪಾಡಿಯಲ್ಲಿ ಪ್ರೊ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಬಂಟ್ವಾಳ ತಾ. ಸರಪಾಡಿ ರಾಜಯೋಗ ಸರಪಾಡಿ ಮತ್ತು ಸರಪಾಡಿ ಫ್ರೆಂಡ್ಸ್ ವತಿಯಿಂದ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹೋರಾಟಗಾರ ಸರಪಾಡಿ ದಿ. ಎನ್. ಸುಬ್ಬಣ್ಣ ಶೆಟ್ಟಿ ಅವರ ಸ್ಮರಣಾರ್ಥ ಅವಿಭಜಿತ ದ.ಕ. ಮತ್ತು ಕಾಸರಗೋಡು ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರೊ ಮಾದರಿಯ ಮುಕ್ತ ಮತ್ತು 65 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಫೆ.1ರಂದು ಸರಪಾಡಿ ಪ್ರೌಢ ಶಾಲಾ ಮೈದಾನದಲ್ಲಿ ಜರಗಲಿದೆ.
ಸಂಜೆ ಪಂದ್ಯಾಟವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿರುವರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಗ್ರಾ.ಪಂ.ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಸೇ.ಸ.ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಮತ್ತಿತರ ಗಣ್ಯರು ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರನ್ನು ಸಮ್ಮಾನಿಸಲಾಗುವುದು. ಸಮಾರೋಪದಲ್ಲಿ ಮಣಿನಾಲ್ಕೂರು ಸೇ.ಸ.ಸಂಘದ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಸುಧಾಕರ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಲಿರುವರು. ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಬಹುಮಾನ ವಿತರಿಸಲಿರುವರು ಎಂದು ಸಂಘಟಕ, ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ ಅವರು ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...