Friday, January 30, 2026

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ಎ.16 ರಿಂದ 19ರ ವರೆಗೆ ಅನುಜ್ಞಾ ಕಲಶ ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಎ. 16 ರಿಂದ 19ರ ವರೆಗೆ ಅನುಜ್ಞಾ ಕಲಶ ಬಾಲಾಲಯ ಪ್ರತಿಷ್ಠೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಕ್ಷೇತ್ರದ ಸಭಾಂಗಣದಲ್ಲಿ ಬಿಡುಗಡೆಗೊಂಡಿತು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ ಹಾಗೂ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಅವರು ಬಿಡುಗಡೆಗೊಳಿಸಿದರು. ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಅವರು ಪ್ರಾರ್ಥನೆ ನೆರವೇರಿಸಿದರು.
ಪುರೋಹಿತ ಗಣಪತಿ ಐತಾಳ್, ಅರ್ಚಕ ಜಯರಾಮ ಕಾರಂತ, ಕ್ಷೇತ್ರದ ಮೊಕ್ತೇಸರರಾದ ವಿಠಲ್ ಎಂ, ಉಮೇಶ್ ಆಳ್ವ ಕೊಟ್ಟುಂಜ, ಸುರೇಂದ್ರ ಪೈ, ಸಮಿತಿಯ ಉಪಾಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕೃಷ್ಣ ಪೂಜಾರಿ ಓಡದಡ್ಕ, ಕಾರ್ಯದರ್ಶಿಗಳಾದ ಅಶೋಕ ಶೆಟ್ಟಿ ಸರಪಾಡಿ, ಧನಂಜಯ ಶೆಟ್ಟಿ ನಾಡಬೆಟ್ಟು, ರಾಧಾಕೃಷ್ಣ ರೈ ಕೊಟ್ಟುಂಜ, ಪ್ರಕಾಶ್ಚಂದ್ರ ಆಳ್ವ ಪಿ, ಸಂತೋಷ್ ಶೆಟ್ಟಿ ಪಿ, ಸುಂದರ ಶೆಟ್ಟಿ ಎಚ್, ಶಶಿಕಾಂತ್ ಶೆಟ್ಟಿ ಆರುಮುಡಿ, ಲೋಕೇಶ್ ಆಚಾರ್ಯ, ಚಂದ್ರಹಾಸ ನಾಯ್ಕ್ ಬಲಯೂರು ಮೊದಲಾದವರಿದ್ದರು.
ಕಾರ್ಯಕ್ರಮಗಳು
ಎ. 16ರಂದು ಸಂಜೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹವನ, ವಾಸ್ತು ಬಲಿ, ಎ. 17 ರಂದು ಬೆಳಗ್ಗೆ ಗಣಪತಿ ಹವನ, ಮೂಲ ಬಿಂಬ ಶುದ್ಧಿ, ಆಶ್ಲೇಷಾ ಪೂಜೆ, ರುದ್ರಹವನ, ರುದ್ರಾಭಿಷೇಕ, ಸಂಜೆ ದುರ್ಗಾ ನಮಸ್ಕಾರ ಪೂಜೆ, ಎ. 18 ರಂದು ಬೆಳಗ್ಗೆ ಅನುಜ್ಞಾ ಕಲಶ, ಮೃತ್ಯುಂಜಯ ಹವನ ಜರಗಲಿದೆ.
ಎ. 19 ರಂದು ಬೆಳಗ್ಗೆ ಗಣಪತಿ ಹವನ, ಪ್ರತಿಷ್ಠಾ ಪ್ರಧಾನ ಹವನ, ಪರಿವಾರ ದೇವರುಗಳ ಪ್ರತಿಷ್ಠೆ, ಶ್ರೀ ದೇವರ ಪ್ರತಿಷ್ಠಾಪನೆ, ಜೀವ ಕಲಶಾಭಿಷೇಕ, ಪಂಚಾಮೃತಾಭಿಷೇಕ, ಚೈತನ್ಯ ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಬೆಳಗ್ಗೆ 11ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಬೆಳ್ಳೂರು ಶ್ರೀ ಶಂಕರನಾರಾಯಣ ದ್ವಾರಕನಾಥ ಗುರೂಜಿ ಬೆಂಗಳೂರು ಅವರು ಆಶೀರ್ವಚನ ನೀಡಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಉದ್ಯಮಿಗಳಾದ ಕೆ.ಡಿ.ಶೆಟ್ಟಿ ಚೆಲ್ಲಡ್ಕ, ಗಣಪತಿ ಸೋಮಯಾಜಿ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು, ಡಾ| ಸತ್ಯಶಂಕರ್ ಶೆಟ್ಟಿ, ಡಾ| ಶಿವಪ್ರಸಾದ್ ಶೆಟ್ಟಿ, ಡಾ| ರಾಜಾರಾಮ್, ಉಷಾಲತಾ ಸರಪಾಡಿ, ಡಾ| ಭರತ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ಬಿ.ಸಿ.ರೋಡ್, ಶಶಿಧರ ಬಂಗೇರ ಪಟ್ಲಕೆರೆ ಭಾಗವಹಿಸಲಿದ್ದಾರೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...