Wednesday, February 4, 2026

ಮಕ್ಕಳಿಗೆ ತುಳು ಸಂಸ್ಕಾರ ಕಲಿಸಿ: ಅಶೋಕ್ ಶೆಟ್ಟಿ ಸರಪಾಡಿ

ಬಂಟ್ವಾಳ: ತುಳು ಕುರಿತು ನಮಗೆ ಕೀಳರಿಮೆ, ಹಿಂಜರಿಕೆ ಬೇಡ. ತುಳು ಭಾಷೆ ನಾಶವಾದರೆ, ನಮ್ಮ ಬದುಕೇ ನಾಶವಾದಂತೆ. ಆದ್ದರಿಂದ ಪೋಷಕರು ಮಕ್ಕಳಿಗೆ ತುಳು ಸಂಸ್ಕಾರ ಕಲಿಸುವ ಕೆಲಸ ಮಾಡಬೇಕೆಂದು ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಅವರು ಹೇಳಿದರು.


ದೇವಶ್ಯಪಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಆಟಿದ ದಿನದ ವಿಶೇಷ, ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಮಕ್ಕಳಿಗೆ ಸ್ಥಳೀಯ ಆಹಾರ ಕ್ರಮ, ಔಷಧಿ ಕ್ರಮ, ಆರೋಗ್ಯ ವಿಧಾನವನ್ನೊಳಗೊಂಡ ತುಳು ಪ್ರಾದೇಶಿಕ ಸಂಸ್ಕೃತಿಯ ಅರಿವಾಗಬೇಕು. ಗ್ರಾಮೀಣ ಬದುಕು ಉಳಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತದೆ ಎಂದವರು ತಿಳಿಸಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನವೀನ್ ಕುಲಾಲ್ ಸಭಾಧ್ಯಕ್ಷತೆ ವಹಿಸಿದ್ದು, ಶಾಲಾಭಿವೃದ್ದಿ ಸಮಿತಿಯ ಮಾಜಿ ಅಧ್ಯಕ್ಷ ಆದಿರಾಜ ಜೈನ್, ಸ್ಥಳೀಯ ಉದ್ಯಮಿಗಳಾದ ಮನ್ಮಥ ರಾಜ್ ಜೈನ್, ದಿವಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
‌ ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಾಲಾ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ದರು
ಹಿರಿಯ ಯಕ್ಷಗಾನ ಕಲಾವಿದ ಅಶೋಕ ಶೆಟ್ಟಿ ಸರಪಾಡಿ ಅವರು ಆಟಿ ದಿನ ವಿಶೇಷತೆಯ ಉಪನ್ಯಾಸ ನೀಡಿದರು.
ಶಾಲಾ ಮುಖ್ಯ ಶಿಕ್ಷಕ ಅವಿನಾಶ್ ಅವರು ಸ್ವಾಗತಿಸಿ, ಶಿಕ್ಷಕಿ ವಂದಿಸಿದರು.
ಆಟಿದ ವಿಶೇಷ ತಿಂಡಿ ತಿನಿಸುಗಳ ಪ್ರಾತ್ಯಕ್ಷಿಕೆ ನೀಡಿ, ಆಹಾರದ ವೈಜ್ಞಾನಿಕ ಗುಣಮಟ್ಟವನ್ನು ವಿದ್ಯಾರ್ಥಿಗಳು ಪರಿಚಯಿಸಿದರು.

More from the blog

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...