Thursday, July 10, 2025

ಸರಪಾಡಿಯಲ್ಲಿ ತೆನೆಹಬ್ಬ

ಪುಂಜಾಲಕಟ್ಟೆ: ಸರಪಾಡಿ ಗ್ರಾಮದ ಐತಿಹಾಸಿಕ ಹಲ್ಲಂಗಾರು ಕಟ್ಟೆಗೆ ಸೆಪ್ಟಂಬರ್ ತಿಂಗಳ ಸಂಕ್ರಮಣದ ಮರುದಿನ ಸಿಂಗುಡೆಯಂದು ಶ್ರೀ ಕ್ಷೇತ್ರ ಕಾರಿಂಜದ ದೇವರು ಆಗಮಿಸಿ, ಇಲ್ಲಿನ ಸ್ಥಳೀಯ ಕಂಬಳದ ಗದ್ದೆಯಿಂದ ಬುಧವಾರ ಭತ್ತದ ತೆನೆಗಳನ್ನು ಕಾರಿಂಜ ಕ್ಷೇತ್ರಕ್ಕೆ ಕೊಂಡೊಯ್ಯಲಾಯಿತು.
ಈ ದಿನದಂದು ಪ್ರತಿವರ್ಷ ಶ್ರೀ ಕ್ಷೇತ್ರ ಕಾರಿಂಜದಿಂದ ಆಗಮಿಸುವ ಶ್ರೀ ದೇವರು ಬೇರೆ ಬೇರೆ ಕಟ್ಟೆಗಳಲ್ಲಿ ಪೂಜಿಸಲ್ಪಟ್ಟು ಬಳಿಕ ಕೊನೆಗೆ ಹಲ್ಲಂಗಾರು ಕಟ್ಟೆಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಸ್ಥಳೀಯ ನೂರಾರು ಭಕ್ತರು ದೇವರ ದರುಶನ ಪಡೆದು, ಗದ್ದೆಯಿಂದ ಭತ್ತದ ತೆನೆ ಪಡೆದು ಮನೆ ತುಂಬಿಸಿಕೊಳ್ಳುತ್ತಾರೆ. ಬಳಿಕ ಪ್ರತಿ ಮನೆಯಲ್ಲೂ ಸಂಪ್ರದಾಯದಂತೆ ಹೊಸ ಅಕ್ಕಿ ಊಟ ಮಾಡುವ ಕಾರ್ಯಕ್ರಮ ನಡೆಯುತ್ತದೆ.
ಹಲ್ಲಂಗಾರು ಕಟ್ಟೆಯ ಬಳಿ ಭತ್ತದ ಗದ್ದೆಯೊಂದಿದ್ದು, ಅಲ್ಲಿ ಪವಿತ್ರ ಕಲ್ಲೊಂದಿದೆ. ಅದು ವರ್ಷದಿಂದ ವರ್ಷಕ್ಕೆ ದೊಡ್ಡದಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಜತೆಗೆ ಬಂಗಾರದ ತೆನೆ ಬೆಳೆದಿತ್ತು ಎಂಬ ನಂಬಿಕೆಯಿದ್ದು, ಬುಧವಾರ ಶ್ರೀ ದೇವರ ಕಟ್ಟೆಯನ್ನು ಶುಚಿತ್ವಗೊಳಿಸಿ ಹೂವುಗಳಿಂದ ಸಿಂಗರಿಸಲಾಗಿತ್ತು. ಈ ಕಾರ್ಯದಲ್ಲಿ ನೂರಾರು ಭಕ್ತಾಧಿಗಳು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಪುನೀತರಾದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...