Friday, January 30, 2026

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಸಾವು

ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...