Monday, February 10, 2025

ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಪ್ರಾರಂಭಗೊಂಡ ಸ್ಥಳ ಶ್ರೀರಾಮ ಮಂದಿರಕ್ಕೆ ಶ್ರೀರಾಮ ವಿದ್ಯಾಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ತೆರಳಿ ಸರಸ್ವತೀ ಪೂಜೆ ಮಾಡಿದರು.

     

ಎಲ್ಲರೂ ಸರಸ್ವತೀ ಮಾತೆಯ ಭಾವಚಿತ್ರ ಹಾಗೂ ಹರಿವಾಣದಲ್ಲಿ ಹೂ ಹಿಡಿದುಕೊಂಡು ವಿದ್ಯಾಕೇಂದ್ರದಿಂದ ಸಾಲಾಗಿ ಶಿಸ್ತುಬದ್ದವಾಗಿ ಶ್ರೀರಾಮ ಮಂದಿರಕ್ಕೆ ತೆರಳಿದರು. ಮಂದಿರದಲ್ಲಿ ವಿದ್ಯಾರ್ಥಿಗಳು ಪೂಜೆ ನಡೆಸಲೆಂದೇ ವಿಶಾಲವಾದ ಚಪ್ಪರದ ವ್ಯವಸ್ಥೆ ಮಾಡಲಾಗಿತ್ತು. ಶಿಶುಮಂದಿರದಿಂದ ಪದವಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿನ ಸರಸ್ವತೀ ಭಾವಚಿತ್ರವನ್ನು ತಮ್ಮ ಮುಂಭಾಗದಲ್ಲಿ ಜೋಡಿಸಿ ಕುಳಿತು ಸರಸ್ವತೀ ಮಂತ್ರವನ್ನು ಸಾಮೂಹಿಕವಾಗಿ ಪಠಿಸಿದರು. ಪುರೋಹಿತರಾದ ಕಶೆಕೋಡಿ ಸೂರ್‍ಯನಾರಾಯಣ ಭಟ್‌ ಇವರು ಪೂಜಾ ವಿಧಾನವನ್ನು ತಿಳಿಸುದುದಲ್ಲದೇ ಪೂಜೆಯ ಮಹತ್ವವನ್ನು ತಿಳಿಸಿದರು.
ಸಭಾಕಾರ್‍ಯಕ್ರಮದಲ್ಲಿ ರಾಮಕೃಷ್ಣ ಮಠ ಮಂಗಳೂರು ಇಲ್ಲಿನ ಸ್ವಾಮೀಜಿಗಳಾದ ಶ್ರೀ ಏಕಗಮ್ಯಾನಂದಜೀ ಇವರು ಸರಸ್ವತೀ ಮಾತೆಯ ವಿಶೇಷತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...