Thursday, February 13, 2025

ಪುಣಚ: ಕೃಷ್ಣಗಿರಿ ಗೆಳೆಯರ ಬಳಗ ವಾರ್ಷಿಕೋತ್ಸವ, ಸಾಮೂಹಿಕ ಸತ್ಯನಾರಾಯಣ ಪೂಜೆ

ವಿಟ್ಲ: ಪುಣಚ ಗ್ರಾಮದ ಕೃಷ್ಣಗಿರಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎ. ೬ ರಂದು ಕೃಷ್ಣಗಿರಿ ಗೆಳೆಯರ ಬಳಗದ ಸಹಯೋಗದಲ್ಲಿ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಗೆಳೆಯರ ಬಳಗದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಸಭಾ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಶಸ್ತಿ ಪುರಸ್ಕೃತ ರಂಗ ನಟ ರಾಜೇಂದ್ರ ರೈ ಮಾತನಾಡಿ ಅವಕಾಶ ಸಿಕ್ಕಿದಾಗ ಪ್ರತಿಯೊಬ್ಬರೂ ಸಹ ತಮ್ಮೊಳಗಿನ ಪ್ರತಿಭೆಗಳನ್ನು ಪ್ರಕಾಶಿಸಲು ಪ್ರಯತ್ನಿಸಬೇಕು. ಯುವಕರ ಸಂಘಟನೆಗಳು ಊರಿನ ಶೈಕ್ಷಣಿಕ, ಸಾಮಾಜಿಕ ಬದಲಾವಣೆಯತ್ತ ಕ್ರಿಯಾಶೀಲವಾಗಬೇಕೆಂದು ತಿಳಿಸಿದರು.
ಕೃಷ್ಣಗಿರಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ ಮಾತನಾಡಿ ಊರಿನ ಸರಕಾರಿ ಶಾಲೆಗಳ ಉಳಿವು, ಬೆಳವಣಿಗೆ ವಿದ್ಯಾಭಿಮಾನಿಗಳ ಕೈಯಲ್ಲಿದೆ. ಸರಕಾರಿ ಶಾಲೆಗಳ ಬಗ್ಗೆ ತಾತ್ಸಾರ, ನಿರ್ಲಕ್ಷ್ಯ ಮನೋಭಾವನೆ ಬಂದರೆ ಶಾಲೆ ಮುಚ್ಚಬಹುದಾದ ಪರಿಸ್ಥಿತಿ ಒದಗಿ ಬರಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯ ಗುಣಮಟ್ಟದ ಶಿಕ್ಷಣದೊಂದಿಗೆ ಸರ್ವಾಂಗೀಣ ಶ್ರೇಯೋಭಿವೃದ್ಧಿಗಾಗಿ ಸರಕಾರಿ ಶಾಲೆಗಳಲ್ಲಿ ನಾನಾ ಕಾರ್‍ಯಯೋಜನೆಗಳಿವೆ ಎಂದು ತಿಳಿಸಿದರು.
ಸಭೆಯನ್ನು ಕನ್ನಡ ಚಲನ ಚಿತ್ರ ನಟ ಮಂಜುನಾಥ್ ಉದ್ಘಾಟಿಸಿದರು. ನಟಿ ಪ್ರಮೋದಿನಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವಪ್ಪ ನಾಯ್ಕ ಉಪಸ್ಥಿತರಿದ್ದರು.
ಕೃಷ್ಣಗಿರಿ ಗೆಳೆಯರ ಬಳಗದ ಅಧ್ಯಕ್ಷ ರಾಜೇಶ್ ಗೌಡ ನಿಡ್ಯಾಳ ಗೆಳೆಯರ ಬಳಗದ ಕಾರ್‍ಯ ಚಟುವಟಿಕೆಗಳ ವರದಿ ವಾಚಿಸಿದರು. ಗೌರವ ಶಿಕ್ಷಕಿ ಸಂಧ್ಯಾ ಶಾಲಾ ವರದಿ ವಾಚಿಸಿದರು.
ಜಯಶ್ರೀ ಬೈಲುಪದವು ಪ್ರಾರ್ಥಿಸಿದರು. ಕೃಷ್ಣಗಿರಿ ಗೆಳೆಯರ ಬಳಗದ ಸಂಚಾಲಕ ಜಯಪ್ರಕಾಶ್ ಪುತ್ತೂರು ಸ್ವಾಗತಿಸಿದರು. ಪ್ರದಾನ ಕಾರ್‍ಯದರ್ಶಿ ಅನಿಲ್ ರೈ ವಂದಿಸಿದರು. ಗೌರವ ಶಿಕ್ಷಕಿ ಗೌತಮಿ ನಾನಾ ಸ್ಪರ್ಧೆಗಳ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪತ್ರಕರ್ತ ವಿಷ್ಣುಗುಪ್ತ ಪುಣಚ ಕಾರ್‍ಯಕ್ರಮ ನಿರೂಪಿಸಿದರು.
ಬೆಳಗ್ಗೆ ಶಾಲೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬರೆಂಜ ಮತ್ತು ಕುರುಡಕಟ್ಟೆ ಅಂಗನವಾಡಿ ಮಕ್ಕಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿಗಳಿಂದ ನಾನಾ ಸಾಂಸ್ಕೃತಿಕ ವೈವಿಧ್ಯ ಕಾರ್‍ಯಕ್ರಮಗಳು ನಡೆದವು. ರಾತ್ರಿ ಕೃಷ್ಣಗಿರಿ ಕಲಾತಂಡದ ಸದಸ್ಯರಿಂದ ’ಕಾರ್ನಿಕದ ಸ್ವಾಮಿ ಕೊರಗಜ್ಜೆ’ ಎಂಬ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...