Sunday, July 13, 2025

ಎ.21 ರಂದು ಶ್ರೀ ಸತ್ಯಸಾಯಿ ಆರಾಧನಾ ಮಹೋತ್ಸವ ಹಾಗೂ ಶ್ರೀ ಸಾಯಿ ನಿಕೇತನ ಸೇವಾಶ್ರಮ ಕಟ್ಟಡದ ವಿಸ್ತರಿಸಿದ ಭಾಗದ ಅನಾವರಣ

ಶ್ರೀ ಸತ್ಯಸಾಯಿ ಸೇವಾ ಪ್ರತಿಷ್ಠಾನ, ದೈಗೋಳಿ ಕುಡ್ಲಮುಗೇರು ಮಂಜೇಶ್ವರ ವತಿಯಿಂದ ಶ್ರೀ ಸತ್ಯಸಾಯಿ ಆರಾಧನಾ ಮಹೋತ್ಸವ ಹಾಗೂ ಶ್ರೀ ಸಾಯಿ ನಿಕೇತನ ಸೇವಾಶ್ರಮ ಕಟ್ಟಡದ ವಿಸ್ತರಿಸಿದ ಭಾಗದ ಅನಾವರಣ ಎ.21 ರಂದು ಆದಿತ್ಯವಾರ 9 ಗಂಟೆಗೆ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಾಗೂ 9.30 ರಿಂದ ಶ್ರೀ ಸತ್ಯನಾರಾಯಣ ಪೂಜೆ ವೇದಮೂರ್ತಿ ಶ್ರೀ ರಾಮ ಭಟ್ಟ ಬೋಳಂತಕೋಡಿ ಅವರಿಂದ ಸಭಾ ಕಾರ್ಯಕ್ರಮ ಬೆಳಿಗ್ಗೆ 9.30ರಿಂದ ಯು.ಗಂಗಾಧರ ಭಟ್ ಅವರ ಅಧ್ಯಕ್ಷತೆಯಲ್ಲಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರಿ ಯೋಗಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಅಪರಾಹ್ನ 2 ರಿಂದ ಕೋಳೂರು ಹವ್ಯಾಸಿ ಯಕ್ಷ ಬಳಗದವರಿಂದ “ಸುಧನ್ವ ಮೋಕ್ಷ-ವೀರವರ್ಮ ಕಾಳಗ” ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...