Friday, January 30, 2026

ಮರಳಿ ಶಾಲೆಗೆ ಬಾ ಮಗುವೆ : ಶಿಕ್ಷಕ, ಪೋಲೀಸರಿಂದ ಮನವೊಲಿಕೆ

ಬಂಟ್ವಾಳ: ಶಾಲೆಗೆ ಗೈರು ಹಾಜರಾದ ಮಕ್ಕಳನ್ನು ಮರಳಿ ಶಾಲೆಗೆ ಹಾಜರಾಗುವಂತೆ ಪೋಲೀಸರು ಹಾಗೂ ಶಿಕ್ಷಕರು ಮನವೊಲಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕೋಲ್ಪೆ ಎಂಬಲ್ಲಿಯ ಗೋಪಾಲಕೃಷ್ಙ, ಸುಂದರಿ ದಂಪತಿಯ ಮಕ್ಕಳಾದ ಶ್ರವಣ್ ಕುಮಾರ್ 7 ನೇ,ತರಗತಿ ,ನಮಿತಾ 3 ನೇ ತರಗತಿ ಇವರು ಶಾಲೆಗೆ ಗೈರು ಹಾಜರಾಗುತ್ತಿದ್ದ ಬಗ್ಗೆ ಕೋಲ್ಪೆ ಪ್ರಾಥಮಿಕ ಶಾಲೆಯ ಅದ್ಯಾಪಕರಾದ ಶ್ರೀಪತಿ ನಾಯಕ್ ,ಪ್ರವೀಣ್ ಕುಮಾರ್ ಹಾಗು ಬೀಟ್ ಸಿಬ್ಬಂದಿ ಹೆಚ್ ಸಿ ಬಾಲಕೃಷ್ಣ ಅವರು  ಮಕ್ಕಳ ಮನೆಗೆ ಹೋಗಿ ಮಕ್ಕಳು ಹಾಗು ಪೋಷಕರೊಂದಿಗೆ ಮಾತನಾಡಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ತಿಳಿಸಿ ಮಕ್ಕಳ ಮನವೊಳಿಸಿದರು.
ನಾಳೆಯಿಂದ ಮಕ್ಕಳು ಶಾಲೆಗೆ ಹಾಜರಾಗುವ ಭರವಸೆ ನೀಡಿದ್ದಾರೆ.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...