Wednesday, January 28, 2026

ಗ್ರಾಮೀಣ ಪ್ರದೇಶದ ಶಾಲೆಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಅವಕಾಶ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಕೃತಿಯ ಜೊತೆ ಬೆರೆಯುವ ಅವಕಾಶ ಪಡೆದಿದ್ದು, ಹೆಚ್ಚು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವಕಾಲೇಜಿನ 67 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ಹಾಗೂ ಒಟ್ಟು 1.25 ಕೋಟಿ ವೆಚ್ಚದ ವಿವಿಧ ಕಾಮಾರಿಗಳ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪುಣ್ಯವಂತರು ಮತ್ತು ಬಹಳಷ್ಟು ಸಾಧನೆ ಮಾಡಲು ಅವಕಾಶ ಸಿಕ್ಕಿದೆ.

ಗ್ರಾಮೀಣ ಭಾಗದ ಜನತೆ ಈ ಕಾಲೇಜಿನ  ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ.  ಶಾಸಕನಾಗಿ ನಾನು ಈ ಭಾಗದ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂಬ ಭರವಸೆ ನೀಡಿದರು.

ಮೂವತ್ತು ವರ್ಷ ಗಳ ಬಳಿಕ ಹೊಸ ಕಟ್ಟಡದಲ್ಲಿ ಕಾಲೇಜು ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ಪಡೆದಿರುವುದು ಸಂತಸ ತಂದಿದೆ.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ  ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಕಾಲೇಜು ಸಮಿತಿ ಸದಸ್ಯ ಸಂದರ್ಶನ ಬಜ, ಧರಣೇಂದ್ರ ಜೈನ್, , ಗ್ರಾ.ಪಂ ಸದಸ್ಯ ರಾದ ರಾಮಕೃಷ್ಣ ಮಯ್ಯ, ಗೀತಾ, ಶಾಂತಪ್ಪ ಪೂಜಾರಿ , ಧನಂಜಯ ಸರಪಾಡಿ, ದಯಾನಂದ ನಾಯ್ಕ, ಜಿ ಎಮ್. ಫಾರೂಕ್, ಚಿದಾನಂದ ರೈ, ಪುರುಷೋತ್ತಮ ಮಜಲು, ಸರೋಜಿನಿ, ದಿನೇಶ್ ಗೌಡ, ಪಿ.ಡಬ್ಲೂ.ಡಿ.ಇಂಜಿನಿಯರ್ ಅಮೃತ್ ಕುಮಾರ್, ಉದ್ಯಮಿ ಜಯಪ್ರಕಾಶ್, ಸ್ಟೇಟ್ಸ್ ಕಂಪೆನಿ ಯ , ಎಚ್.ಆರ್.ಅಫೀಸರ್ ಭರತ್, ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರಮನಾಥ ರಾಯಿ, ಪ್ರಮುಖರಾದ ರವೀಂದ್ರ ಶೆಟ್ಟಿ ಕಯ್ಯಾಳ, ನಾಗೇಶ್ ಅಗರಗಂಡಿ, ಮತ್ತಿತರ ರು ಉಪಸ್ಥಿತರಿದ್ದರು.

ಸಮಿತಿ ಉಪಾಧ್ಯಕ್ಷ ಪೂವಪ್ಪ ಪೂಜಾರಿ ಕಡಂಬಾಜೆ ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಪ್ರಾಂಶುಪಾಲೆ ಸ್ಮಿತಾ ಸ್ವಾಗತಿಸಿದರು. ಉಪನ್ಯಾಸಕಿ ಅಮೃತ ಕೊಡಿಯಾಲ್ ಬೈಲು, ಉಪನ್ಯಾಸಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...