Friday, January 30, 2026

ಖಾಸಗಿ ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ -ಶಾಲಾ ಆಡಳಿತ ಮಂಡಳಿಗೆ ಕಡಿವಾಣ ಹಾಕಿದ ಶಿಕ್ಷಣ ಇಲಾಖೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಾಲೆಗಳ ಶುಲ್ಕ ಹೆಚ್ಚಳ ಮಾಡುವಂತಿಲ್ಲ ಎಂದು ಖಾಸಗಿ ಶಾಲಾಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಕೆ.ಜೆ. ಜಗದೀಶ್ ಸುತ್ತೋಲೆ ಹೊರಡಿಸಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020 -21 ನೇ ಸಾಲಿಗೆ ಶುಲ್ಕ ಹೆಚ್ಚಳ ಮಾಡಬಾರದು. ಕಳೆದ ಸಾಲಿನಲ್ಲಿ ಪಡೆದ ಶುಲ್ಕಕ್ಕಿಂತ ಕಡಿಮೆ ಶುಲ್ಕ ಪಡೆಯಲು ಇಚ್ಛಿಸಿದಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶುಲ್ಕ ಹೆಚ್ಚಳ ಮಾಡದಂತೆ ಆದೇಶ ಹೊರಡಿಸಿದೆ.

ಕೊರೊನಾ ಮಾಹಾಮಾರಿ ಹಿನ್ನಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆ ಪೋಷಕರು ಶಾಲಾ ಶುಲ್ಕ ಪಾವತಿಸಲು ಪರಿತಪಿಸುವಂತಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕ ಶೇಕಡಾ 15ರ ಮಿತಿಯೊಳಗೆ ಬೋಧನಾ ಶುಲ್ಕ ಹೆಚ್ಚಳ ಮಾಡಲು ಅವಕಾಶವಿದೆ. ಈ ಬಾರಿ ಶುಲ್ಕ ಹೆಚ್ಚಳ ಮಾಡದಂತೆ ತಿಳಿಸಲಾಗಿದೆ. ಅಲ್ಲದೆ ಮಾರ್ಚ್, ಏಪ್ರಿಲ್ ತಿಂಗಳ ಶುಲ್ಕ ಪಾವತಿಸಲು ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಒತ್ತಡ ಹಾಕಬಾರದು. ಸಂಕಷ್ಟದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಯಾವುದೇ ಶುಲ್ಕ ಹೆಚ್ಚಳ ಮಾಡಬಾರದು. ಸರ್ಕಾರದ ಸೂಚನೆ ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...