ಧರ್ಮಸ್ಥಳ: 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ಮಾತನಾಡಿ, ತನ್ನ ನೆನಪುಗಳನ್ನು ಮೆಲುಕು ಹಾಕಿದರು. ಪಬ್ಲಿಕ್ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

