ಬಂಟ್ವಾಳ, ಜೂನ್ 21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್ಡಿಪಿಐ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಎಸ್ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಛೇರಿ ಮುಂಭಾಗದಲ್ಲಿ ದ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಯೂಸುಫ್ ಆಲಡ್ಕ ದ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಪಕ್ಷದ ಮುಖಂಡ ಅನ್ವರ್ ಸಾದತ್ ಗೂಡಿನಬಳಿ ಪಕ್ಷ ಸಾಗಿ ಬಂದ ಹಾದಿ ಹಾಗೂ ಹೋರಾಟದ ಕುರಿತು ಮಾತನಾಡಿದರು. ಈ ಸಂದರ್ಭ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್ ಹಾಗೂ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮಾತನಾಡಿದರು. ಬಂಟ್ವಾಳ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಉಬೈದುಲ್ಲಾ ಬಂಟ್ವಾಳ, ಬಂಟ್ವಾಳ ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ, ಎಸ್.ಡಿ.ಟಿ.ಯು ಮುಖಂಡ ಯಾಕೂಬ್ ಮದ್ದ ಉಪಸ್ಥಿತರಿದ್ದರು.ಕಲಂದರ್ ಪರ್ತಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
