ಏಪ್ರಿಲ್ 17ರಂದು 2019ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಯು ಏ.29ರಿಂದ ಮೇ 1ರವರೆಗೆ ನಡೆಯಲಿದೆ. ಪಿಯುನಲ್ಲಿ ವಿಜ್ಞಾನ ವಿಷಯ ವ್ಯಾಸಂಗ ಮಾಡಿರುವ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯುವುದರಿಂದ ವಿದ್ಯಾರ್ಥಿಗಳಿಗೆ ಒತ್ತಡ ಕಡಿಮೆಯಾಗಲಿದೆ.
ಇದೇ ಮೊದಲ ಬಾರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿದೆ.ಈ ಸಾಲಿನಿಂದ ಮೌಲ್ಯಮಾಪಕರು ಅಂಕಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿರುವುದರಿಂದ ಫಲಿತಾಂಶದ ಸಿದ್ಧತೆ ಕೆಲಸ ಪಿಯು ಇಲಾಖೆಗೆ ಸರಳವಾಗಿದೆ. 2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಸಿಇಟಿ ಮೊದಲಿಗೆ ಪಿಯು ಫಲಿತಾಂಶ ಪ್ರಕಟವಾಗುವುದರಿಂದ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಕೊಂಚ ಕಡಿಮೆಯಾಗುತ್ತದೆ. ಪಿಯುನಲ್ಲಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಳ್ಳಬೇಕೆ ಬೇಡವೇ ಎಂದು ತೀರ್ಮಾನಿಸಲು ಕಾಲವಕಾಶ ಇರುತ್ತದೆ.ಸಿಇಟಿ ಫಲಿತಾಂಶದ ವೇಳೆ ಶೇ.50ರಷ್ಟು ಪಿಯು ಮತ್ತು ಶೇ.50ರಷ್ಟು ಸಿಇಟಿ ಅಂಕಗಳನ್ನು ಪರಿಗಣಿಸಲಾಗುತ್ತದೆ.
